ಮುಂಬೈ: ಸೂರ್ಯಕುಮಾರ್ ಯಾದವ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಇಂಪ್ಯಾಕ್ಟ್ ಆಟಗಾರನನ್ನಾಗಿ ಕಣಕ್ಕಿಳಿಸಲಾಯಿತು ಎಂದು ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲಾ ಜಯವರ್ಧನೆ ತಿಳಿಸಿದ್ದಾರೆ.

ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ ಪರ ಆಡುತ್ತಿದ್ದು, ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅವರನ್ನು ಇಂಪ್ಯಾಕ್ಟ್ ಆಟಗಾರನನ್ನಾಗಿ ಕಣಕ್ಕಿಳಿಸಲಾಗಿತ್ತು.

ಕಳೆದ ಆವೃತ್ತಿಯಲ್ಲಿ ರೋಹಿತ್ ಶರ್ಮಾ ಅವರು ಮುಂಬೈ ಇಂಡಿಯನ್ಸ್ ಪರ ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಂಡಿದ್ದರು.

ಸೂರ್ಯಕುಮಾರ್ ಯಾದವ್ ಅವರು ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆದಿದ್ದಾರೆ. ಅವರು ಸಂಪೂರ್ಣ ಗುಣಮುಖರಾಗಿದ್ದಾರೆ, ಅದರೂ ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಸಲಾಯಿತು. ಇದು ಬಿಟ್ಟು ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಕೆಆರ್ ವಿರುದ್ಧ ಫೀಲ್ಡಿಂಗ್ ಮಾಡದೇ ಇಂಪ್ಯಾಕ್ಟ್ ಆಟಗಾರನಾಗಿ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್, 8 ಎಸೆತಗಳಲ್ಲಿ 3 ಬೌಂಡರಿ ಸಹಿತ 16 ರನ್ಗಳಿಸಿ ಕಾರ್ತಿಕ್ ತ್ಯಾಗಿಗೆ ವಿಕೆಟ್ ಒಪ್ಪಿಸಿದರು.

ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ವಿರುದ್ಧ 6 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ, 14 ವರ್ಷಗಳ ಬಳಿಕ ಆವೃತ್ತಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.