ಟಿ20 ವಿಶ್ವಕಪ್ ಟ್ರೋಫಿ ಗೆದ್ದಿರುವ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಜಯ್ ಶಾ ಅವರು ಟ್ರೋಫಿ ಜೊತೆಗೆ ಅಹಮದಾಬಾದ್ನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕಪ್ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿರುವುದಕ್ಕೆ ಮಾಜಿ ಕ್ರಿಕೆಟಿಗ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಕೀರ್ತಿ ಆಜಾದ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1983ರ ವಿಶ್ವಕಪ್ ವಿಜೇತ ಭಾರತೀಯ ತಂಡದ ಭಾಗವಾಗಿದ್ದ ಕೀರ್ತಿ ಆಜಾದ್ ಅವರು ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು, ‘ನಾವು 1983ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ವಿಶ್ವಕಪ್ ಗೆದ್ದಾಗ, ನಮ್ಮ ತಂಡದಲ್ಲಿ ಹಿಂದೂ, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ ಎಲ್ಲರೂ ಇದ್ದರು. ನಾವು ಟ್ರೋಫಿಯನ್ನು ನಮ್ಮ ಧಾರ್ಮಿಕ ಜನ್ಮಸ್ಥಳವಾದ ಮಾತೃಭೂಮಿ ಭಾರತ, ಹಿಂದೂಸ್ತಾನಕ್ಕೆ ತಂದಿದ್ದೆವು. ಈಗೇಕೆ ದೇವಸ್ಥಾನಕ್ಕೆ ತೆಗೆದುಕೊಂಡು ಹೋದರು. ವಿಶ್ವಕಪ್ ಟ್ರೋಫಿ ಎಲ್ಲರಿಗೂ ಸೇರಿದ್ದು’ ಎಂದು ಅಜಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ವಿಶ್ವಕಪ್ ಗೆದ್ದ ತಂಡವು ಭಾರತವನ್ನು ಪ್ರತಿನಿಧಿಸುತ್ತದೆ ಹೊರತು, ಸೂರ್ಯ ಕುಮಾರ್ ಯಾದವ್ ಅಥವಾ ಜಯ್ ಶಾ ಅವರ ಕುಟುಂಬವನ್ನು ಪ್ರತಿನಿಧಿಸುವುದಿಲ್ಲ’ ಎಂದಿದ್ದಾರೆ.

‘ಸಿರಾಜ್ ಅವರು ಟ್ರೋಫಿಯನ್ನು ಮಸೀದಿಗೆ ತೆಗೆದುಕೊಂಡು ಹೋಗಿ ಮೆರವಣಿಗೆ ಮಾಡಲಿಲ್ಲ. ಸಂಜು ಸ್ಯಾಮ್ಸನ್ ಅವರು ಚರ್ಚ್ಗೆ ತೆಗೆದುಕೊಂಡು ಹೋಗಲಿಲ್ಲ. ಈ ಟ್ರೋಫಿಯು ಪ್ರತಿಯೊಂದು ಧರ್ಮದ 140 ಕೋಟಿ ಭಾರತೀಯರಿಗೆ ಸೇರಿದ್ದು, ಒಂದೇ ಒಂದು ಧರ್ಮದ ವಿಜಯೋತ್ಸವವಲ್ಲ’ ಎಂದು ಟ್ರೋಫಿಯನ್ನು ದೇವಸ್ಥಾನಕ್ಕೆ ತೆಗೆದುಕೊಂಡ ಹೋಗಿರುವುದಕ್ಕೆ ಆಜಾದ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.