ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ವಿರುದ್ಧ ಟಿ–20 ಸರಣಿಗೆ ಸೂರ್ಯ ನಾಯಕ

ವಿಶ್ವಕಪ್‌ ತಂಡದಲ್ಲಿದ್ದ ಮೂವರಿಗೆ ಸ್ಥಾನ
Published 21 ನವೆಂಬರ್ 2023, 0:30 IST
Last Updated 21 ನವೆಂಬರ್ 2023, 0:30 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟರ್‌ ಸೂರ್ಯಕುಮಾರ್ ಯಾದವ್‌ ಅವರನ್ನು, ಆಸ್ಟ್ರೇಲಿಯಾ ವಿರುದ್ಧ ಇದೇ ತಿಂಗಳ 23ರಂದು ಆರಂಭವಾಗುವ ಐದು ಪಂದ್ಯಗಳ ಟಿ–20 ಸರಣಿಗೆ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ.

ಏಕದಿನ ವಿಶ್ವಕಪ್‌ನಲ್ಲಿ ಆಡಿದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಮೂವರು ಆಟಗಾರರು ಈ ತಂಡಕ್ಕೂ ಆಯ್ಕೆಯಾಗಿದ್ದಾರೆ. ಸೂರ್ಯಕುಮಾರ್ ಜೊತೆಗೆ ವಿಶ್ವಕಪ್ ತಂಡಲ್ಲಿದ್ದ  ಪ್ರಸಿದ್ಧಕೃಷ್ಣ ಮತ್ತು ಇಶಾನ್ ಕಿಶನ್ ಅವರು ಈ ಸರಣಿಯಲ್ಲಿ ಆಡಲಿದ್ದಾರೆ.

ಆರಂಭ ಆಟಗಾರ ಋತುರಾಜ್ ಗಾಯಕವಾಡ್ ಅವರು ಉಪನಾಯಕರಾಗಿದ್ದಾರೆ. ಆದರೆ ಕೊನೆಯ ಎರಡು ಪಂದ್ಯಗಳಿಗೆ (ನ. 28ರಂದು ರಾಯ್‌ಪುರ ಮತ್ತು ಡಿ. 3 ರಂದು ಬೆಂಗಳೂರು) ಶ್ರೇಯಸ್‌ ಅಯ್ಯರ್‌ ಆವರು ಉಪನಾಯಕರಾಗಲಿದ್ದಾರೆ.

ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್‌), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್ ಮತ್ತು ಮುಕೇಶ್ ಕುಮಾರ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT