ಮಂಗಳವಾರ, ಮಾರ್ಚ್ 21, 2023
25 °C

ಮಹಾಕಾಲೇಶ್ವರ ದೇವಾಲಯಕ್ಕೆ ಭೇಟಿ; ರಿಷಭ್ ಪಂತ್ ಚೇತರಿಕೆಗೆ ಟೀಂ ಇಂಡಿಯಾ ಪ್ರಾರ್ಥನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಭಾರತ ಕ್ರಿಕೆಟ್‌ ತಂಡದ ಕೆಲವು ಆಟಗಾರರು ಉಜ್ಜಯಿನಿಯಲ್ಲಿರುವ ಮಹಾಕಾಲೇಶ್ವರ ದೇವಾಲಯಕ್ಕೆ ಸೋಮವಾರ (ಜನವರಿ 23 ರಂದು) ಇಂದು ಭೇಟಿ ನೀಡಿ, ರಿಷಭ್‌ ಪಂತ್‌ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಟಿ20 ಕ್ರಿಕೆಟ್‌ನ ನಂಬರ್‌ 1 ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌, ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌, ಎಡಗೈ ಸ್ಪಿನ್ನರ್‌ ಕುಲದೀಪ್‌ ಯಾದವ್‌ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಮೂಲಗಳ ಪ್ರಕಾರ, ಶಿವನಿಗೆ ಸಲ್ಲಿಸುವ 'ಭಸ್ಮ ಆರತಿ' ಪೂಜೆಯಲ್ಲಿ ಆಟಗಾರರು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

ವಿಕೆಟ್‌ ಕೀಪರ್‌, ಬ್ಯಾಟರ್‌ ರಿಷಭ್‌ ಪಂತ್‌ ಅವರು 2022 ಡಿಸೆಂಬರ್ 30ರಂದು ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಅವರು ಚಾಲನೆ ಮಾಡುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಆದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಪಂತ್‌ ಅವರನ್ನು ಮೊದಲು ಡೆಹ್ರಾಡೂನ್‌ ಮ್ಯಾಕ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಉನ್ನತ ಮಟ್ಟದ ಚಿಕಿತ್ಸೆಗಾಗಿ, ಇದೀಗ ಮುಂಬೈಗೆ ಏರ್‌ಲಿಫ್ಟ್‌ ಮಾಡಲಾಗಿದೆ. ಈ ವರ್ಷಾಂತ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಿಂದ ಅವರು ಹೊರಗುಳಿಯುವ ಸಾಧ್ಯತೆ ಇದೆ.

ಇವನ್ನೂ ಓದಿ


    ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

    ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

    ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

    ಈ ವಿಭಾಗದಿಂದ ಇನ್ನಷ್ಟು