ಕ್ರಿಕೆಟ್: ಬೆಂಗಳೂರಿನಲ್ಲಿ ಟ್ವೆಂಟಿ–20 ಕಲರವ

ಮಂಗಳವಾರ, ಜೂನ್ 18, 2019
23 °C
2019–20 ಸಾಲಿನಲ್ಲಿ ತವರು ನೆಲದಲ್ಲಿ ಭಾರತ ಕ್ರಿಕೆಟ್‌ ತಂಡ ಆಡುವ ಪಂದ್ಯಗಳ ವೇಳಾಪಟ್ಟಿ ಪ್ರಕಟ

ಕ್ರಿಕೆಟ್: ಬೆಂಗಳೂರಿನಲ್ಲಿ ಟ್ವೆಂಟಿ–20 ಕಲರವ

Published:
Updated:

ನವದೆಹಲಿ (ರಾಯಿಟರ್ಸ್): ಸೆಪ್ಟೆಂಬರ್‌ 22ರಂದು ಬೆಂಗಳೂರಿನಲ್ಲಿ ನಡೆಯುವ ಟ್ವೆಂಟಿ–20 ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. 2019–20ರ ಋತುವಿನಲ್ಲಿ ಭಾರತದಲ್ಲಿ ನಡೆಯುವ ಕ್ರಿಕೆಟ್‌ ಪಂದ್ಯಗಳನ್ನು ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. 2020ರ ಜನವರಿ 19ರಂದು ನಡೆಯುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಪೈಪೋಟಿಗೂ ಬೆಂಗಳೂರು ಸಾಕ್ಷಿಯಾಗಲಿದೆ.

ಈ ವರ್ಷದ ಕೊನೆಯಲ್ಲಿ ಕೊಹ್ಲಿ ಪಡೆ ಐದು ಟೆಸ್ಟ್‌ ಪಂದ್ಯಗಳನ್ನು ಆಡಲಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಆರಂಭವಾಗಲಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ವಿಶ್ವ ಟೆಸ್ಟ್‌ ಕ್ರಮಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ ಸೆಪ್ಟೆಂಬರ್ 15ರಿಂದ ಮೂರು ಟ್ವೆಂಟಿ–20 ಹಾಗೂ ಅಕ್ಟೋಬರ್‌ನಲ್ಲಿ ಮೂರು ಟೆಸ್ಟ್‌ ಪಂದ್ಯಗಳಲ್ಲಿ ಸೆಣಸಲಿದೆ.

ಈ ವರ್ಷದ ನವೆಂಬರ್‌ನಲ್ಲಿ  ಬಾಂಗ್ಲಾ ವಿರುದ್ಧ ಎರಡು ಟೆಸ್ಟ್‌ ಹಾಗೂ ಮೂರು ಟ್ವೆಂಟಿ–20 ಪಂದ್ಯಗಳಲ್ಲಿ ಬಾಂಗ್ಲಾ ವಿರುದ್ಧ ಕಣಕ್ಕಿಳಿಯಲಿದೆ.

ಭಾರತ ತಂಡ ತವರಿನಲ್ಲಿ ಒಟ್ಟು ಒಂಬತ್ತು ಏಕದಿನ ಹಾಗೂ 12 ಟ್ವೆಂಟಿ–20 ಪಂದ್ಯಗಳನ್ನು ಆಡಲಿದೆ. ಡಿಸೆಂಬರ್‌ನಲ್ಲಿ ವೆಸ್ಟ್‌ ಇಂಡೀಸ್‌ ಮತ್ತು ಜನವರಿಯಲ್ಲಿ ಜಿಂಬಾಬ್ವೆ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾರತಕ್ಕೆ ಆಗಮಿಸಲಿವೆ.

2021ರ ಮಾರ್ಚ್‌ನಲ್ಲಿ ಕೊಹ್ಲಿ ನೇತೃತ್ವದ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !