ಅಹಮದಾಬಾದ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಅಮೋಘ ಅರ್ಧಶತಕದ (89) ಸಾಧನೆ ಮಾಡಿದ್ದಾರೆ.

ಆ ಮೂಲಕ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಸತತ ಮೂರನೇ ಅರ್ಧಶತಕ ಗಳಿಸಿದ್ದಾರೆ.

ಸೂಪರ್ 8ರ ಹಂತದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅರ್ಧಶತಕ ಗಳಿಸಿದ ಸಂಜು, ಬಳಿಕ ಇಂಗ್ಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲೂ ಅರ್ಧಶತಕದ ಗೆರೆ ದಾಟಿದ್ದರು.

ಆ ಮೂಲಕ ಸತತ ಮೂರನೇ ಅರ್ಧಶತಕ ಗಳಿಸಿರುವ ಸಂಜು, ಭಾರತದ ದಿಗ್ಗಜ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

2016 ಹಾಗೂ 2021ನೇ ಆವೃತ್ತಿಗಳಲ್ಲಿ ವಿರಾಟ್ ಕೊಹ್ಲಿ ಸತತ ಮೂರು ಅರ್ಧಶಕಗಳನ್ನು ಗಳಿಸಿದ್ದರು.
.T20 WC Final| ಸಂಜು, ಅಭಿಷೇಕ್, ಕಿಶನ್ ಅಬ್ಬರ: ಕಿವೀಸ್ ಗೆಲುವಿಗೆ ಬೃಹತ್ ಗುರಿ.T20 WC Final| ಅಭಿಷೇಕ್–ಸಂಜು ಬ್ಯಾಟಿಂಗ್ ಅಬ್ಬರ, ಪವರ್ಪ್ಲೇನಲ್ಲಿ ಭಾರತ ದಾಖಲೆ.
ಟಿ20 ವಿಶ್ವಕಪ್ ಸೆಮಿಫೈನಲ್, ಫೈನಲ್ನಲ್ಲಿ ಅರ್ಧಶತಕ...

ಇನ್ನು ಟಿ20 ವಿಶ್ವಕಪ್ ಸೆಮಿಫೈನಲ್ ಹಾಗೂ ಫೈನಲ್ನಲ್ಲಿ ಅರ್ಧಶತಕ ಗಳಿಸಿದ ದಾಖಲೆಗೂ ಸಂಜು ಭಾಜನರಾಗಿದ್ದಾರೆ. ಇಲ್ಲೂ ಕಿಂಗ್ ಕೊಹ್ಲಿ ದಾಖಲೆಯನ್ನು ಸಂಜು ಸರಿಗಟ್ಟಿದ್ದಾರೆ.

2014ರಲ್ಲಿ ವಿರಾಟ್ ಹಾಗೂ 2009ರಲ್ಲಿ ಶಾಹೀದ್ ಅಫ್ರಿದಿ, ಟಿ20 ವಿಶ್ವಕಪ್ ಸೆಮಿಫೈನಲ್ ಹಾಗೂ ಫೈನಲ್ನಲ್ಲಿ ಅರ್ಧಶತಕಗಳನ್ನು ಗಳಿಸಿದ್ದರು.

24 ಸಿಕ್ಸರ್...

ಈ ಬಾರಿಯ ವಿಶ್ವಕಪ್ನಲ್ಲಿ ಸಂಜು ಒಟ್ಟು 24 ಸಿಕ್ಸರ್ಗಳನ್ನು ಸಿಡಿಸಿದ್ದಾರೆ. ಇದು ವಿಶ್ವಕಪ್ ಆವೃತ್ತಿಯೊಂದರಲ್ಲಿ ಭಾರತೀಯ ಬ್ಯಾಟರ್ನ ಶ್ರೇಷ್ಠ ಸಾಧನೆಯಾಗಿದೆ.

ಇನ್ನು 2024ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ನ ಫಿನ್ ಅಲೆನ್ 25 ಸಿಕ್ಸರ್ಗಳನ್ನು ಸಿಡಿಸಿದ್ದರು.

ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಎಂಟು ಸಿಕ್ಸರ್ಗಳ ನೆರವಿನಿಂದ 89 ರನ್ ಗಳಿಸಿದರು.

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಐದು ವಿಕೆಟ್ ನಷ್ಟಕ್ಕೆ 255 ರನ್ಗಳ ಬೃಹತ್ ಮೊತ್ತ ಪೇರಿಸಿತು.

ಭಾರತದ ಪರ ಮೂವರು ಬ್ಯಾಟರ್ಗಳು ಅರ್ಧಶತಕಗಳ ಸಾಧನೆ ಮಾಡಿದ್ದಾರೆ. ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ (52) ಹಾಗೂ ಇಶಾನ್ ಕಿಶನ್ (54) ಅರ್ಧಶತಕಗಳನ್ನು ಗಳಿಸಿ ಅಬ್ಬರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.