ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ವಿಶ್ವಕಪ್‌: ಜೂನ್‌ 10ರಂದು ನಿರ್ಧಾರ

Last Updated 28 ಮೇ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಟ್ವೆಂಟಿ–20 ವಿಶ್ವಕಪ್ ಟೂರ್ನಿಯನ್ನು ಇದೇ ವರ್ಷ ಆಯೋಜಿಸುವ ಅಥವಾ ಮುಂದೂಡುವ ಬಗ್ಗೆ ಜೂನ್ 10ರಂದು ನಿರ್ಧರಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನಿರ್ಧರಿಸಿದೆ.

ಗುರುವಾರ ನಡೆದ ಐಸಿಸಿ ಸದಸ್ಯರ ಟಿಲಿ ಕಾನ್ಫರೆನ್ಸ್‌ನಲ್ಲಿ ಟಿ20 ವಿಶ್ವಕಪ್ ಮತ್ತಿತರ ವಿಷಯಗಳ ಕುರಿತ ನಿರ್ಣಯಗಳನ್ನೂ ಮುಂದಿನ ತಿಂಗಳವರೆಗೂ ಕಾದಿರಿಸಲಾಯಿತು.

ಕೊರೊನಾ ವೈರಸ್ ಹಾವಳಿಯಿಂದಾಗಿ ವಿಶ್ವದ ಬಹಳಷ್ಟು ರಾಷ್ಟ್ರಗಳಲ್ಲಿ ಲಾಕ್‌ಡೌನ್‌ ಇರುವುದರಿಂದ ಅಕ್ಟೋಬರ್‌–ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ಆಯೋಜನೆಯು ಅನಿಶ್ಚಿತವಾಗಿದೆ. ಒಂದೊಮ್ಮೆ ವಿಶ್ವಕಪ್ ಟೂರ್ನಿ ಮುಂದೂಡಿದರೆ, ಆ ಅವಧಿಯಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಸಲು ಉತ್ಸುಕವಾಗಿದೆ.

‘ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯು ವೇಗವಾಗಿ ಬದಲಾಗುತ್ತಿದೆ. ಆದ್ದರಿಂದ ಐಸಿಸಿ ಆಡಳಿತವು ತನ್ನ ಸದಸ್ಯ ರಾಷ್ಟ್ರಗಳು ಮತ್ತಿತರ ಸಂಬಂಧಿತರೊಂದಿಗೆ ಚರ್ಚೆಗಳನ್ನು ಮುಂದುವರಿಸುವುದು. ಹಂತಹಂತವಾಗಿ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಐಸಿಸಿ ಹೇಳಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT