ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20 Ranking: ಐದನೇ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ

Last Updated 28 ಏಪ್ರಿಲ್ 2021, 14:09 IST
ಅಕ್ಷರ ಗಾತ್ರ

ದುಬೈ : ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟ್ವೆಂಟಿ–20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆರಂಭಿಕ ಆಟಗಾರ ಕೆ.ಎಲ್‌.ರಾಹುಲ್‌ ಏಳನೇ ಕ್ರಮಾಂಕದಲ್ಲಿ ಸ್ಥಿರವಾಗಿದ್ದಾರೆ.

ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 10ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಈ ವಿಭಾಗದಲ್ಲಿ ಇಂಗ್ಲೆಂಡ್‌ನ ಡೇವಿಡ್ ಮಲಾನ್‌ ಮೊದಲ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾದ ಆ್ಯರನ್ ಫಿಂಚ್‌ ಎರಡನೇ ಕ್ರಮಾಂಕದಲ್ಲಿದ್ದಾರೆ.

ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲೂ ಕೊಹ್ಲಿ ಐದನೇ ಸ್ಥಾನ ಕಾಯ್ದುಕೊಂಡಿದ್ದಾರೆ. ರೋಹಿತ್ ಶರ್ಮಾ ಸ್ಥಾನ ಏಳನೆಯದ್ದು. ಈ ವಿಭಾಗದ ಮೊದಲ ಸ್ಥಾನ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಅವರದ್ದಾಗಿದೆ.

ಟೆಸ್ಟ್ ಬೌಲರ್‌ಗಳ ವಿಭಾಗದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿದ್ದರೆ, ಭಾರತದ ಆರ್‌.ಅಶ್ವಿನ್‌ ಎರಡನೇ ಸ್ಥಾನದಲ್ಲಿದ್ದಾರೆ.

ರವೀಂದ್ರ ಜಡೇಜ ಅವರು ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಅಶ್ವಿನ್ ಸ್ಥಾನ ನಾಲ್ಕನೆಯದ್ದು. ಮೊದಲ ಸ್ಥಾನದಲ್ಲಿ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT