ಭಾನುವಾರ, ಮಾರ್ಚ್ 26, 2023
24 °C

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಜಂಪಾಗೆ ಕೋವಿಡ್ ಪಾಸಿಟಿವ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಪರ್ತ್‌: ಆಸ್ಟ್ರೇಲಿಯಾ ಲೆಗ್‌ ಸ್ಪಿನ್ನರ್ ಆ್ಯಡಂ ಜಂಪಾ ಅವರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ. 

ಕೋವಿಡ್‌ ಹಿನ್ನೆಲೆಯಲ್ಲಿ ಇಂದು ಶ್ರೀಲಂಕಾ ವಿರುದ್ಧ ನಡೆಯಲಿರುವ ಪಂದ್ಯದಿಂದ ಜಂಪಾ ಹೊರಗುಳಿದಿದ್ದಾರೆ.

ಜಂಪಾಗೆ ಕೋವಿಡ್‌ ಸೌಮ್ಯ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ. ಹಾಗಾಗಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದಿಲ್ಲ. ಆದರೆ ಟೂರ್ನಿಯ ಇನ್ನುಳಿದ ಪಂದ್ಯಗಳಲ್ಲಿ ಅವರು ಆಡಲಿದ್ದಾರೆ ಎಂದು ಆಸ್ಟ್ರೇಲಿಯಾ ತಂಡ ವಕ್ತಾರರು ಖಚಿತಪಡಿಸಿದ್ದಾರೆ. 

ಟಾಸ್‌ ಗೆದ್ದ ಆಸ್ಟ್ರೇಲಿಯಾ: ಬೌಲಿಂಗ್ ಆಯ್ಕೆ
ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯ ಸೂಪರ್ 12 ಹಂತದ ತನ್ನ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಎದುರು ಟಾಸ್‌ ಗೆದ್ದಿರುವ ಆಸ್ಟ್ರೇಲಿಯಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿರುವ ಫಿಂಚ್‌ ಪಡೆ ಈ ಪಂದ್ಯದಲ್ಲಿ ಪುಟಿದೇಳುವ ವಿಶ್ವಾಸದಲ್ಲಿದೆ.

ಆ್ಯರನ್‌ ಫಿಂಚ್‌ ನಾಯಕತ್ವದ ಆತಿಥೇಯ ಆಸ್ಟ್ರೇಲಿಯಾ ಮೊದಲ ಸೆಣಸಾಟದಲ್ಲಿ ನ್ಯೂಜಿಲೆಂಡ್‌ ಎದುರು 89 ರನ್‌ಗಳ ಭಾರೀ ಅಂತರದ ಸೋಲನುಭವಿಸಿತ್ತು. ಆದರೆ ಶ್ರೀಲಂಕಾ ತಂಡವು ಭಾನುವಾರ ಐರ್ಲೆಂಡ್‌ಗೆ ಸೋಲುಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು