ನವದೆಹಲಿ: ಮುಂಬರುವ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಅಕ್ಟೋಬರ್ 24ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣಸಲಿವೆ. ಆದರೆ ಈಗಿನಿಂದಲೇ ಪಂದ್ಯದ ರೋಚಕತೆ ಎಲ್ಲೆಡೆ ಮನೆ ಮಾಡಿದೆ.
ವಿಶ್ವಕಪ್‌ನಲ್ಲಿ ಇದುವರೆಗೆ ಪಾಕಿಸ್ತಾನ ವಿರುದ್ಧ ಭಾರತ ಸೋತಿಲ್ಲ. ಆದರೆ ಈ ಬಾರಿ ಚಿತ್ರಣ ಬದಲಾಗಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಹೇಳಿಕೆ ನೀಡುತ್ತಿದ್ದಾರೆ.
ಈ ನಡುವೆ ಭಾರತ ಹಾಗೂ ಪಾಕಿಸ್ತಾನ ನಡುವಣ ವಿಶ್ವಕಪ್ ಪಂದ್ಯದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ನಾಯಕ ಶಾಹೀದ್ ಅಫ್ರಿದಿ, ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬಲ್ಲ ತಂಡವು ಗೆಲುವು ದಾಖಲಿಸಲಿದೆ ಎಂದು ಹೇಳಿದ್ದಾರೆ.
ತಮ್ಮ ಯೂಟ್ಯೂಬ್ಚಾನೆಲ್ ಮೂಲಕ ಅಭಿಮಾನಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಆಫ್ರಿದಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.
'ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ಯಾವತ್ತೂ ಅತೀವ ಒತ್ತಡದಿಂದ ಕೂಡಿರುತ್ತದೆ. ಆದರೆ ಯಾವ ತಂಡವು ಒತ್ತಡವನ್ನು ನಿಭಾಯಿಸಲು ಸಮರ್ಥವಾಗಿದೆಯೋ ಹಾಗೂ ಅತ್ಯಂತ ಕಡಿಮೆ ತಪ್ಪುಗಳನ್ನು ಮಾಡುತ್ತದೆಯೋ ಆ ತಂಡಕ್ಕೆ ಗೆಲುವು ದಾಖಲಿಸುವ ಅವಕಾಶ ಹೆಚ್ಚಿದೆ' ಎಂದಿದ್ದಾರೆ.
ಎಲ್ಲ ಮಾದರಿಯ ಕ್ರಿಕೆಟ್ ವಿಶ್ವಕಪ್‌ಗಳಲ್ಲಿ ಪಾಕಿಸ್ತಾನ ವಿರುದ್ಧ ಭಾರತವು 12-0ರ ಅಂತರದ ಗೆಲುವಿನ ದಾಖಲೆಯನ್ನು ಹೊಂದಿವೆ. ಏಕದಿನ ವಿಶ್ವಕಪ್‌ನಲ್ಲಿ 7-0 ಹಾಗೂ ಟಿ20 ವಿಶ್ವಕಪ್‌ನಲ್ಲಿ 5-0 ಅಂತರವನ್ನು ಕಾಪಾಡಿಕೊಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.