ಸೋಮವಾರ, ಜನವರಿ 17, 2022
19 °C

T20 WC: 2019ರಲ್ಲಿ ಬೌಲ್ಟ್; 2021ರಲ್ಲಿ ಬೆಸ್ಟೊ; ಕೈಕೊಟ್ಟ ಲಕ್!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಮುಖಾಮುಖಿಯಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ದಾಖಲಿಸಿರುವ ನ್ಯೂಜಿಲೆಂಡ್ ಫೈನಲ್‌ಗೆ ಲಗ್ಗೆಯಿಟ್ಟಿದೆ. ಈ ಮೂಲಕ 2019ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಎದುರಾದ ಸೋಲಿಗೆ ಸೇಡು ತೀರಿಸಿಕೊಂಡಿದೆ.

ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವಣ ಪಂದ್ಯವು ಹಲವಾರು ರೋಚಕ ಕ್ಷಣಗಳಿಗೆ ಎಡೆಮಾಡಿಕೊಟ್ಟಿತು. ಅಂತಿಮ ಕ್ಷಣದ ವರೆಗೂ ಕುತೂಹಲ ಕೆರಳಿಸಿದ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಮಹತ್ವದ ಅವಕಾಶಗಳನ್ನು ಕೈಚೆಲ್ಲಿರುವುದು ಹಿನ್ನಡೆಯಾಗಿ ಪರಿಣಮಿಸಿತ್ತು.

ಈ ಪೈಕಿ ಪಂದ್ಯದ ನಿರ್ಣಾಯಕ ಹಂತದಲ್ಲಿ ಇಂಗ್ಲೆಂಡ್ ಫೀಲ್ಡರ್ ಜಾನಿ ಬೆಸ್ಟೊ ಕ್ಯಾಚ್ ಹಿಡಿದರೂ ಮೊಣಕಾಲು ಬೌಂಡರಿ ಗೆರೆಯನ್ನು ಸ್ಪರ್ಶಿಸಿದ ಹಿನ್ನಲೆಯಲ್ಲಿ ಅವಕಾಶ ಕೈತಪ್ಪಿತು.

 

 

 

ಪರಿಣಾಮ ಕ್ರಿಸ್ ಜಾರ್ಡನ್ ಓವರ್‌ವೊಂದರಲ್ಲಿ 23 ರನ್ ಸೊರೆಗೈದು ಜೇಮ್ಸ್ ನಿಶಾಮ್ ಪಂದ್ಯಕ್ಕೆ ತಿರುವು ನೀಡುವಲ್ಲಿ ಯಶಸ್ವಿಯಾಗಿದ್ದರು.

 

11 ಎಸೆತಗಳನ್ನು ಎದುರಿಸಿದ್ದ ನಿಶಾಮ್ ಮೂರು ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 27 ರನ್ ಗಳಿಸಿ ಇತ್ತಂಡಗಳ ನಡುವಣ ವ್ಯತ್ಯಾಸಕ್ಕೆ ಕಾರಣರಾದರು. 

2019ರ ಏಕದಿನ ವಿಶ್ವಕಪ್ ಫೈನಲ್‌ನಲ್ಲೂ ಇದಕ್ಕೆ ಸಮಾನವಾದ ಘಟನೆ ಘಟಿಸಿತ್ತು. ಅಂದು ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಹೊಡೆದ ಚೆಂಡನ್ನು ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ ಹಿಡಿಯುವಲ್ಲಿ ಯಶಸ್ವಿಯಾದರೂ ಕಾಲು ಬೌಂಡರಿ ಗೆರೆ ಸ್ಪರ್ಶಿಸಿದ ಹಿನ್ನೆಲೆಯಲ್ಲಿ ಕಿವೀಸ್‌ಗೆ ವಿಶ್ವಕಪ್ ಗೆಲುವಿನ ಅವಕಾಶ ಕೈತಪ್ಪಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು