ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ವಿಶ್ವಕಪ್: ರನ್‌ ಗಳಿಕೆ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ

Last Updated 2 ನವೆಂಬರ್ 2022, 16:22 IST
ಅಕ್ಷರ ಗಾತ್ರ

ಅಡಿಲೇಡ್: ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆಯೋಜನೆಗೊಳ್ಳುವುದು ಖಚಿತವಾಗುತ್ತಿದ್ದಂತೆಯೇ ತಮ್ಮ ಬ್ಯಾಟಿಂಗ್ ಕೌಶಲಗಳನ್ನು ಸುಧಾರಣೆ ಮಾಡಿಕೊಂಡಿದ್ದಾಗಿ ಭಾರತದ ಬ್ಯಾಟರ್ ವಿರಾಟ್ ಕೊಹ್ಲಿ ಹೇಳಿದ್ದಾರೆ.

ದೀರ್ಘ ಸಮಯದವರೆಗೆ ಫಾರ್ಮ್‌ ಕಳೆದುಕೊಂಡು ಪರದಾಡಿದ್ದ ವಿರಾಟ್ ಈ ಟೂರ್ನಿಯಲ್ಲಿ ರನ್‌ಗಳ ಹೊಳೆ ಹರಿಸುತ್ತಿದ್ದಾರೆ. ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರು ಅರ್ಧಶತಕ ಗಳಿಸಿದ್ದಾರೆ. ಮೊದಲ ಪಂದ್ಯದಲ್ಲಿ ಪಾಕ್ ಎದುರು ಹಾಗೂ ಬುಧವಾರ ಬಾಂಗ್ಲಾದೇಶ ಎದುರು ಪಂದ್ಯಶ್ರೇಷ್ಠ ಗೌರವ ಗಳಿಸಿದ್ದಾರೆ.

ಬಾಂಗ್ಲಾ ಎದುರಿನ ಪಂದ್ಯದಲ್ಲಿ 16 ರನ್‌ ಹೊಡೆದ ಸಂದರ್ಭದಲ್ಲಿ ಅವರು ವಿಶ್ವಕಪ್ ಟೂರ್ನಿಗಳಲ್ಲಿ ಅತಿ ಹೆಚ್ಚು ರನ್‌ಗಳನ್ನು ಗಳಿಸಿದ ವಿಶ್ವದಾಖಲೆ ನಿರ್ಮಿಸಿದರು. ಮಹೇಲಾ ಜಯವರ್ಧನೆ (1016ರನ್) ಅವರ ದಾಖಲೆಯನ್ನು ಮೀರಿ ನಿಂತರು.

ಪಂದ್ಯದ ನಂತರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ನಿಖರವಾದ ಕ್ರಿಕೆಟ್‌ ಹೊಡೆತಗಳ ಮೂಲಕವೇ ಇಲ್ಲಿ ಹೆಚ್ಚು ರನ್‌ಗಳನ್ನು ಗಳಿಸಲು ಸಾಧ್ಯ. ಅದಕ್ಕಾಗಿ ಬಹಳಷ್ಟು ಶ್ರಮಪಟ್ಟು ಅಭ್ಯಾಸ ಮಾಡಿದೆ. ಅದರ ಫಲ ಈಗ ಸಿಗುತ್ತಿದೆ. ಇವತ್ತು ಕೂಡ ಒಂದು ಒಳ್ಳೆಯ ದಿನ’ ಎಂದರು.

ಅಡಿಲೇಡ್‌ ಕ್ರೀಡಾಂಗಣದಲ್ಲಿಯೇ ಕೊಹ್ಲಿ 2012ರಲ್ಲಿ ನಡೆದಿದ್ದ ಟೆಸ್ಟ್‌ನಲ್ಲಿ ಶತಕ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT