ಬುಧವಾರ, ಡಿಸೆಂಬರ್ 8, 2021
23 °C

T20 WC: ಮಾರ್ಕರಮ್ ಸ್ಫೋಟಕ ಅರ್ಧ ಶತಕ, ದಕ್ಷಿಣ ಆಫ್ರಿಕಾಕ್ಕೆ 8 ವಿಕೆಟ್ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ: ಮಾರ್ಕರಮ್ ಸಿಡಿಸಿದ ಸ್ಫೋಟಕ ಅರ್ಧ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧದ ಟಿ–20 ವಿಶ್ವಕಪ್‌ ಸೂಪರ್‌–12 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಲೆವಿಸ್ 35 ಎಸೆತಗಳಲ್ಲಿ 56 ರನ್ ಸಿಡಿಸಿದರೂ ಸಹ ವೆಸ್ಟ್ ಇಂಡೀಸ್ ದೊಡ್ಡ ಟಾರ್ಗೆಟ್ ನೀಡುವಲ್ಲಿ ವಿಫಲವಾಯಿತು. ವಿಂಡೀಸ್ ನೀಡಿದ್ದ 144 ರನ್ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು 18.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು.

26 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಸಹಿತ ಅಜೇಯ 51 ರನ್ ಸಿಡಿಸಿದ ಮಾರ್ಕರಮ್ ಗೆಲುವಿನ ರೂವಾರಿಯಾದರು. ಡುಸೆನ್ ಅಜೇಯ 45, ರೀಜಾ ಹೆಂಡ್ರಿಕ್ಸ್ 39 ರನ್ ಸಿಡಿಸಿದರು.

ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಎರಡೂ ತಂಡಗಳು ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ತಮ್ಮ ಮೊದಲ ಪಂದ್ಯದಲ್ಲಿ ಸೋಲನುಭವಿಸಿದ್ದವು. ಇದೀಗ, ದಕ್ಷಿಣ ಆಫ್ರಿಕಾವು ಭರ್ಜರಿ ಕಮ್ ಬ್ಯಾಕ್ ಮಾಡಿದೆ. ತನ್ನ ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಶ್ರೀಲಂಕಾವನ್ನು ಎದುರಿಸಲಿದ್ದು, ವೆಸ್ಟ್ ಇಂಡೀಸ್ ತಂಡವು ಬಾಂಗ್ಲಾ ವಿರುದ್ಧ ಸೆಣಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು