ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಸೆಮಿಫೈನಲ್ ಹಾದಿ ಕಠಿಣವೆನಿಸಿದೆ.

ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ.

ಭಾರತ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರಲಿದೆ.

ಈ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ಪಾಕಿಸ್ತಾನ ಮೂಲದ ನಟಿ ಸೆಹರ್ ಶಿನ್ವಾರಿ, ಭಾರತ ವಿರುದ್ಧ ಜಿಂಬಾಬ್ವೆ ಗೆದ್ದರೆ ಆ ದೇಶದ ಯುವಕನನ್ನು ಮದುವೆಯಾಗುವುದಾಗಿ ಹೇಳಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಜಿಂಬಾಬ್ವೆ ನಡುವಣ ಪಂದ್ಯ ಮೆಲ್ಬರ್ನ್‌ನಲ್ಲಿ ನವೆಂಬರ್ 6, ಭಾನುವಾರದಂದು ನಡೆಯಲಿದೆ.

ಕೆಲವು ದಿನಗಳ ಹಿಂದೆಯಷ್ಟೇ ಪಾಕಿಸ್ತಾನ ವಿರುದ್ಧ ಭಾರತ ಗೆದ್ದರೆ ತಮ್ಮ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಡಿಲೀಟ್ ಮಾಡುವುದಾಗಿ ಟ್ವೀಟ್ ಮಾಡಿದ್ದರು. ಬಳಿಕ ಪಾಕಿಸ್ತಾನ ವಿರುದ್ಧ ಭಾರತ ರೋಚಕ ಗೆಲುವು ದಾಖಲಿಸಿತ್ತು. ಆದರೆ ಸೆಹರ್ ತಮ್ಮ ಮಾತಿನಂತೆ ನಡೆದುಕೊಂಡಿರಲಿಲ್ಲ. ಈಗ ಮದುವೆ ವಿಚಾರದಲ್ಲೂ ಹೀಗಾಗಲಿದೆ ಎಂದು ಕ್ರಿಕೆಟ್ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.