ಶನಿವಾರ, ಮಾರ್ಚ್ 25, 2023
22 °C

ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕ್ರಿಸ್ ಗೇಲ್ ವಿದಾಯ?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್ ಕೇವಲ 15 ರನ್ ಗಳಿಸಿ ಔಟ್ ಆಗಿದ್ದಾರೆ.

ಇದು ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗೇಲ್, ವಿಂಡೀಸ್ ಜೆರ್ಸಿಯಲ್ಲಿ ಆಡಿದ ಕೊನೆಯ ಪಂದ್ಯವಾಗಿದೆ ಎಂದೇ ಅಂದಾಜಿಸಲಾಗಿದೆ.

ಇದನ್ನೂ ಓದಿ: 

ಈ ಸಂಬಂಧ ಗೇಲ್ ಯಾವುದೇ ಅಧಿಕೃತ ಘೋಷಣೆಯನ್ನು ಮಾಡಿಲ್ಲ. ಆದರೆ ಔಟ್ ಆದ ಬಳಿಕ ಪೆವಿಲಿಯನ್‌ಗೆ ಹಿಂತಿರುಗಿದ್ದ ವೇಳೆ ಪ್ರೇಕ್ಷಕರತ್ತ ಬ್ಯಾಟ್ ಬೀಸುತ್ತಾ ಹೆಜ್ಜೆ ಹಾಕಿದರು. ಈ ವೇಳೆಯಲ್ಲಿ ಸ್ಟೇಡಿಯಂನಲ್ಲಿದ್ದ ಅಭಿಮಾನಿಗಳು ಎದ್ದು ನಿಂತು ಕೈಚಪ್ಪಾಳೆ ತಟ್ಟಿ ಗೌರವಿಸಿದರು. ಡ್ವೇನ್ ಬ್ರಾವೊ ಸೇರಿದಂತೆ ಸಹ ಆಟಗಾರರು ಗೇಲ್ ಅವರನ್ನು ಅಲಿಂಗನ ಮಾಡಿಕೊಂಡರು.

 

 

 

ಇದರಿಂದಾಗಿ ಮುಂದಿನ ವರ್ಷ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಗೇಲ್ ಆಡುವರೇ ಎಂಬುದು ಅನುಮಾನವೆನಿಸಿದೆ. ಕೇವಲ ಒಂಬತ್ತು ಎಸೆತಗಳನ್ನು ಎದುರಿಸಿದ ಗೇಲ್ ಇನ್ನಿಂಗ್ಸ್‌ನಲ್ಲಿ ಎರಡು ಸಿಕ್ಸರ್‌ಗಳು ಸೇರಿದ್ದವು.

 

42 ವರ್ಷದ ಗೇಲ್ 79 ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ 27.93ರ ಸರಾಸರಿಯಲ್ಲಿ 1899 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕ ಹಾಗೂ 14 ಅರ್ಧಶತಕಗಳು ಸೇರಿವೆ.

ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಅನೇಕ ದಾಖಲೆಗಳನ್ನು ಬರೆದಿರುವ ಗೇಲ್, 'ಯೂನಿವರ್ಸ್ ಬಾಸ್' ಎಂದೇ ಖ್ಯಾತಿ ಪಡೆದಿದ್ದಾರೆ.

 

 

 

ಏತನ್ಮಧ್ಯೆ ಮಗದೋರ್ವ ದಿಗ್ಗಜ ಆಟಗಾರ ಡ್ವೇನ್ ಬ್ರಾವೊ, ತಮ್ಮ ಕೊನೆಯ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ 10 ರನ್ ಗಳಿಸಿ ಔಟ್ ಆದರು.

 

 

 

 

 

 

 

 

 

 

 

 

 

 

 

 

 

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು