ಶುಕ್ರವಾರ, ಜನವರಿ 21, 2022
30 °C

ಟಿ–20 ವಿಶ್ವಕಪ್: ಧೋನಿಯ ಅನುಭವ ಟೀಮ್ ಇಂಡಿಯಾಗೆ ಉಪಯುಕ್ತವಾಗಲಿದೆ: ಗಂಭೀರ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಟಿ–20 ವಿಶ್ವಕಪ್‌ನಲ್ಲಿ ಎಂ.ಎಸ್‌.ಧೋನಿ ಅವರ ಅನುಭವ ಟೀಮ್‌ ಇಂಡಿಯಾಗೆ ಹೆಚ್ಚು ನೆರವಾಗಲಿದೆ’ ಎಂದು ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್ ಹೇಳಿದ್ದಾರೆ.

‘ಟೀಮ್ ಇಂಡಿಯಾದ ಮಾರ್ಗದರ್ಶಕರಾಗಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಕ ಮಾಡಿರುವುದು ತಂಡಕ್ಕೆ ಮತ್ತಷ್ಟು ಬಲ ತಂದಿದೆ. 2007ರಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ಚೊಚ್ಚಲ ಟಿ–20 ವಿಶ್ವಕಪ್‌ ಗೆದ್ದಿತ್ತು. ಅಪಾರ ಅನುಭವ ಹೊಂದಿರುವ ಧೋನಿ ಅವರ ಉಪಸ್ಥಿತಿ ಟೀಮ್‌ ಇಂಡಿಯಾಗೆ ಹೆಚ್ಚು ಅನುಕೂಲವಾಗಲಿದೆ. ಜತೆಗೆ ಅವರು ಯುವ ಆಟಗಾರರಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಲಿದ್ದಾರೆ’ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಅ.24ರಂದು (ಭಾನುವಾರ) ಟಿ–20 ವಿಶ್ವಕಪ್‌ ಅಭಿಯಾನವನ್ನು ಆರಂಭಿಸಲಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳ ಪೈಕಿ ಭಾರತವೂ ಒಂದಾಗಿದೆ.

ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಗೆಲುವಿಗಾಗಿ ಹೋರಾಟ ನಡೆಸಲಿದೆ. ನಾಯಕ ವಿರಾಟ್‌ ಕೊಹ್ಲಿ, ಕೆ.ಎಲ್‌.ರಾಹುಲ್‌, ರವೀಂದ್ರ ಜಡೇಜ ಉತ್ತಮ ಫಾರ್ಮ್‌ನಲ್ಲಿದ್ದಾರೆ.

ಇತ್ತೀಚೆಗೆ ಮುಕ್ತಾಯವಾದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ನಾಲ್ಕನೇ ಬಾರಿಗೆ ಪ್ರಶಸ್ತಿ ಗೆದ್ದು ಸಾಧನೆ ಮಾಡಿತ್ತು.

ಇದನ್ನೂ ಓದಿ... 'ಮೆಂಟರ್' ಸಿಂಗ್ ಧೋನಿ ಈಸ್ ಬ್ಯಾಕ್; ಅಭಿಮಾನಿಗಳ ಸಂಭ್ರಮ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು