ಮಂಗಳವಾರ, ಡಿಸೆಂಬರ್ 7, 2021
23 °C

T20WC: ಭಾರತದ ಈ ಆಟಗಾರ ‘ಗೇಮ್ ಚೇಂಜರ್’ ಎಂದು ವಾಸಿಂ ಅಕ್ರಂ ಹೇಳಿದ್ದು ಯಾರಿಗೆ?

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ‘ಟಿ–20 ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಪರ ಆಡುತ್ತಿರುವ ಸೂರ್ಯಕುಮಾರ್‌ ಯಾದವ್‌ ಅವರು ಉತ್ತಮ ಬ್ಯಾಟಿಂಗ್‌ ಕೌಶಲಗಳನ್ನು ಮೈಗೂಡಿಸಿಕೊಂಡಿದ್ದು, ‘ಗೇಮ್ ಚೇಂಜರ್’ ಆಗುವ  ಎಲ್ಲಾ ಸಾಮರ್ಥ್ಯ ಹೊಂದಿದ್ದಾರೆ’ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿ ವಾಸಿಂ ಅಕ್ರಂ, ‘ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಆಡಿದ್ದ ಸೂರ್ಯಕುಮಾರ್‌ ಅವರು ತಂಡಕ್ಕೆ ಗೆಲುವು ತಂದುಕೊಡುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು. ಜತೆಗೆ, ಅವರ ಆಟಗಾರನಾಗಿ ಸಾಕಷ್ಟು ಸುಧಾರಿಸಿದ್ದಾರೆ’ ಎಂದು ಹೇಳಿದ್ದಾರೆ.

ಅಕ್ಟೋಬರ್ 24ರಂದು ಭಾನುವಾರ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ. ಈ ರೋಚಕ ಪಂದ್ಯವನ್ನು ವೀಕ್ಷಿಸಲು ಕ್ರಿಕೆಟ್‌ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತ್ತು.

ಇವನ್ನೂ ಓದಿ...

ವಿಶ್ವಕಪ್ ಬಳಿಕ ನಾಯಕತ್ವಕ್ಕೆ ಕೊಹ್ಲಿ ಗುಡ್ ಬೈ: ಯಾವುದೇ ಒತ್ತಡವಿಲ್ಲ ಎಂದ ಗಂಗೂಲಿ

T20 WC: ಭಾರತದ ವಿರುದ್ಧದ ಪಂದ್ಯಕ್ಕೆ ತಂಡ ಪ್ರಕಟಿಸಿದ ಪಾಕಿಸ್ತಾನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು