ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20 WC ಸೆಮಿಫೈನಲ್: ಕೊಹ್ಲಿ–ಪಾಂಡ್ಯ ಅರ್ಧಶತಕ; ಇಂಗ್ಲೆಂಡ್‌ಗೆ 169 ರನ್ ಗುರಿ

Last Updated 10 ನವೆಂಬರ್ 2022, 9:54 IST
ಅಕ್ಷರ ಗಾತ್ರ

ಅಡಿಲೇಡ್‌: ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ 'ರನ್‌ ಮಷಿನ್‌' ಖ್ಯಾತಿಯ ವಿರಾಟ್‌ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿದರು. ಹೀಗಾಗಿ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 168 ರನ್ ಕಲೆಹಾಕಿದೆ.

ಇಲ್ಲಿನ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ಜಾಸ್‌ ಬಟ್ಲರ್‌ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಆಡಿದ ಇಂಗ್ಲೆಂಡ್ ಬೌಲರ್‌ಗಳು, ಭಾರತದ ಆರಂಭಿಕರನ್ನು ಬೇಗನೆ ಔಟ್‌ ಮಾಡಿದರು.

ಉಪನಾಯಕ ಕೆ.ಎಲ್‌.ರಾಹುಲ್‌ ಕೇವಲ 5 ರನ್‌ ಗಳಿಸಿ ಔಟಾದರೆ, ನಾಯಕ ರೋಹಿತ್‌ ಶರ್ಮಾ 27 ಗಳಿಸಿದ್ದಾಗ ವಿಕೆಟ್‌ ಒಪ್ಪಿಸಿದರು. ಬಳಿಕ ಬಂದ ಸ್ಫೋಟಕ ಬ್ಯಾಟರ್‌ಸೂರ್ಯಕುಮಾರ್‌ ಯಾದವ್‌ (14) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ, ರನ್‌ ಗಳಿಕೆಗೆ ಕಡಿವಾಣ ಬಿದ್ದಿತು.

ಈ ವೇಳೆ ವಿಕೆಟ್‌ ಬೀಳದಂತೆ ಎಚ್ಚರಿಕೆಯ ಆಟವಾಡಿದ ಕೊಹ್ಲಿ ಮತ್ತು ಹಾರ್ದಿಕ್‌ ಪಾಂಡ್ಯ, ನಾಲ್ಕನೇ ವಿಕೆಟ್ ಪಾಲುದಾರಿಕೆಯಲ್ಲಿ 61 ರನ್‌ ಕೂಡಿಸಿದರು. ಆರಂಭದಲ್ಲಿ ರಕ್ಷಣಾತ್ಮಕವಾಗಿ ಆಡಿದ ಈ ಜೋಡಿ ನಿಧಾನವಾಗಿ ರನ್‌ ಗತಿ ಹೆಚ್ಚಿಸಿತು.

ಈ ಟೂರ್ನಿಯಲ್ಲಿ 4ನೇ ಅರ್ಧಶತಕ ಗಳಿಸಿದ ಕೊಹ್ಲಿ, 40 ಎಸೆತಗಳಲ್ಲಿ 50 ರನ್‌ ಗಳಿಸಿ 18ನೇ ಓವರ್‌ನ ಕೊನೇ ಎಸೆತದಲ್ಲಿ ವಿಕೆಟ್‌ ಒಪ್ಪಿಸಿದರು.

ಕೊನೇವರೆಗೂ ಆಡಿದ ಪಾಂಡ್ಯ 33 ಎಸೆತಗಳಲ್ಲಿ 5ಸಿಕ್ಸರ್‌ ಮತ್ತು 4 ಬೌಂಡರಿ ಸಹಿತ 63 ರನ್‌ ಸಿಡಿಸಿ ಇನಿಂಗ್ಸ್‌ನ ಅಂತಿಮ ಎಸೆತದಲ್ಲಿ ಔಟಾದರು.

ಇಂಗ್ಲೆಂಡ್‌ ಪರಕ್ರಿಸ್‌ ಜೋರ್ಡನ್‌ ಮೂರು ವಿಕೆಟ್ ಪಡೆದರೆ,ಕ್ರಿಸ್‌ ವೋಕ್ಸ್‌ ಹಾಗೂಆದಿಲ್‌ ರಶೀದ್‌ ಒಂದೊಂದು ವಿಕೆಟ್‌ ಕಿತ್ತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT