ನವದೆಹಲಿ: ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಇಂದು (ಮಂಗಳವಾರ) ಪ್ರಕಟವಾಗಿದ್ದು, 2026ರ ಫೆಬ್ರುವರಿ 7ರಿಂದ ಟೂರ್ನಿ ಆರಂಭವಾಗಲಿದೆ.

ಫೆ.7ರಂದು ಮುಂಬೈಯಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ ಮತ್ತು ಯುಎಸ್ಎ ತಂಡಗಳು ಮುಖಾಮುಖಿಯಾಗಲಿವೆ. ಫೆ.15ರಂದು ಭಾರತ–ಪಾಕಿಸ್ತಾನ ತಂಡಗಳು ಸೆಣಸಾಟ ನಡೆಸಲಿವೆ.

ಟೀಮ್ ಇಂಡಿಯಾದ ಹಿರಿಯ ಆಟಗಾರ ರೋಹಿತ್ ಶರ್ಮಾ ಅವರನ್ನು ವಿಶ್ವಕಪ್ ಟೂರ್ನಿಯ ರಾಯಭಾರಿಯನ್ನಾಗಿ ಘೋಷಿಸಲಾಗಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ, ಕೋಲ್ಕತ್ತದ ಈಡನ್ ಗಾರ್ಡನ್ಸ್, ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣ, ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯಗಳು ನಿಗದಿಯಾಗಿವೆ.

2026ರ ಮಾರ್ಚ್ 8ರಂದು ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲಂಬೊದಲ್ಲಿ ನಡೆಯಲಿದೆ.

ಭಾರತದ ವೇಳಾಪಟ್ಟಿ

ಭಾರತದ ಗುಂಪಿನಲ್ಲಿ ಪಾಕಿಸ್ತಾನ, ಅಮೆರಿಕ, ನೆದರ್ಲ್ಯಾಂಡ್ಸ್ ಮತ್ತು ನಮೀಬಿಯಾ ತಂಡಗಳಿವೆ.

ಫೆ. 7: ಭಾರತ vs ಅಮೆರಿಕ (ಮುಂಬೈ)

ಫೆ. 12: ಭಾರತ vs ನಮೀಬಿಯಾ (ದೆಹಲಿ)

ಫೆ. 15: ಭಾರತ vs ಪಾಕಿಸ್ತಾನ (ಕೊಲಂಬೊ)

ಫೆ. 18: ಭಾರತ vs ನೆದರ್ಲ್ಯಾಂಡ್ಸ್ (ಅಹಮದಾಬಾದ್)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.