ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದ ಮೊದಲ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ, ಪಾಕಿಸ್ತಾನ ವಿರುದ್ಧ ಭಾರತಕ್ಕೆ 4 ವಿಕೆಟ್ ಅಂತರದ ರೋಚಕ ಗೆಲುವು ತಂದುಕೊಟ್ಟರು.

ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು (ಅಕ್ಟೋಬರ್ 23) ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159ರನ್ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಇನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ(4) ಹಾಗೂ ಉಪನಾಯಕ ಕೆ.ಎಲ್.ರಾಹುಲ್ (4) ತಂಡದ ಮೊತ್ತ 10 ರನ್ ಆಗುವಷ್ಟರಲ್ಲಿ ಪೆವಿಲಿಯನ್ ಸೇರಿಕೊಂಡರು.

ಬಳಿಕ ಬಂದ ಸೂರ್ಯಕುಮಾರ್ ಯಾದವ್ (15) ಮತ್ತು ಅಕ್ಷರ್ ಪಟೇಲ್ (2) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ ಕೇವಲ 31 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕಂಡು ಸಂಕಷ್ಟಕ್ಕೆ ಸಿಲುಕಿತ್ತು.

ಇದನ್ನೂ ಓದಿ:T20 World Cup | ಅಮೋಘ ಬ್ಯಾಟಿಂಗ್ ಮೂಲಕ ಪಾಕ್ ಎದುರು ಗೆಲುವು ತಂದುಕೊಟ್ಟ ಕೊಹ್ಲಿ

ಈ ಹಂತದಲ್ಲಿ ಹಾರ್ದಿಕ್ ಪಾಂಡ್ಯ (40) ಜೊತೆಗೂಡಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಕೊಹ್ಲಿ, ರಕ್ಷಣಾತ್ಮಕವಾಗಿ ಅಡುತ್ತಲೇ ರನ್ ಗತಿ ಹೆಚ್ಚಿಸಿದರು. ಕೊನೆಯವರೆಗೂ ಹೋರಾಡಿ ಗೆಲುವು ತಂದುಕೊಟ್ಟರು. ಕೇವಲ53 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ಸಹಿತ 82 ರನ್ ಬಾರಿಸಿ ಮಿಂಚಿದರು.ಅವರ ಆಟದ ಬಲದಿಂದಾಗಿ ಭಾರತಕ್ಕೆ 4 ವಿಕೆಟ್ ಅಂತರದ ಜಯ ಒಲಿಯಿತು.

ಈ ಇನಿಂಗ್ಸ್ ಬಗ್ಗೆ ಅವರ (ಕೊಹ್ಲಿ) ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಂದ್ಯದ ಬಳಿಕ ಟೀಂ ಇಂಡಿಯಾ ಆಟಗಾರರು ಸಂಭ್ರಮಿಸುತ್ತಿರುವ ಚಿತ್ರಗಳನ್ನು ಹಂಚಿಕೊಂಡಿರುವ ಅನುಷ್ಕಾ, 'ನೀನು ಈ ರಾತ್ರಿ ಜನರಲ್ಲಿ ಸಾಕಷ್ಟು ಸಂತಸವನ್ನು ತಂದಿರುವೆ. ಅದೂ ದೀಪಾವಳಿ ಮುನ್ನಾದಿನ!' ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, 'ನೀನು ಅದ್ಭುತವಾದ ವ್ಯಕ್ತಿ. ನಿನ್ನ ಸ್ಥೈರ್ಯ, ತ್ಯಾಗ ಮತ್ತು ವಿಶ್ವಾಸ ಎಂತಹವರನ್ನೂ ಚಕಿತಗೊಳಿಸುತ್ತದೆ!! ನಾನು ನನ್ನ ಜೀವನದಲ್ಲೇ ಅತ್ಯುತ್ತಮ ಪಂದ್ಯವನ್ನು ನೋಡಿದೆ ಎಂದು ಹೇಳಬಲ್ಲೆ. ತನ್ನ ತಾಯಿ ಏಕೆ ರೂಮಿನಲ್ಲಿ ಕುಣಿದಾಡುತ್ತಿದ್ದಾಳೆ, ಚೀರಾಡುತ್ತಿದ್ದಾಳೆ ಎಂಬುದನ್ನು ಅರ್ಥ ಮಾಡಿಕೊಳ್ಳಲುನಮ್ಮ ಮಗಳು ಇನ್ನೂ ಚಿಕ್ಕವಳು. ಆದರೆ, ಆ ರಾತ್ರಿ ಅವಳ ಅಪ್ಪ ಅತ್ಯಂತ ಕಠಿಣ ಸಂದರ್ಭದಲ್ಲಿ, ತನ್ನ ಮೇಲೆ ಅಪಾರ ಹೊರೆ ಇದ್ದಾಗಲೂ ಇಂದೆಂದಿಗಿಂತ ಹೆಚ್ಚು ಪ್ರಬಲವಾಗಿ ಮತ್ತು ಪ್ರಬುದ್ಧವಾಗಿ ಸವಾಲನ್ನು ಮೀರಿ ಹೊರ ಬಂದಿದ್ದರು. ವೃತ್ತಿ ಜೀವನದ ಅತ್ಯುತ್ತಮ ಇನಿಂಗ್ಸ್ ಆಡಿದ್ದರು ಎಂಬುದನ್ನು ಮುಂದೊಂದು ದಿನ ಅರ್ಥ ಮಾಡಿಕೊಳ್ಳುತ್ತಾಳೆ.ತುಂಬಾ ಹೆಮ್ಮೆ ಪಡುತ್ತಿದ್ದೇನೆ!!' ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.