ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

'ಬಂಬೈಸೆ ಆಯಾ ಮೇರಾ ದೋಸ್ತ್'; ರೋಹಿತ್ ಜತೆ ಪೋಸ್ಟ್ ಹಂಚಿಕೊಂಡ ರಶೀದ್

Published 25 ಜೂನ್ 2024, 14:37 IST
Last Updated 25 ಜೂನ್ 2024, 14:37 IST
ಅಕ್ಷರ ಗಾತ್ರ

ಬೆಂಗಳೂರು: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿರುವ ಅಫ್ಗಾನಿಸ್ತಾನ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಆ ಮೂಲಕ ಇತಿಹಾಸ ರಚಿಸಿದೆ. ಈ ಸಂದರ್ಭದಲ್ಲಿ ಅಫ್ಗಾನಿಸ್ತಾನದ ನಾಯಕ ರಶೀದ್ ಖಾನ್ ಅವರು ಟೀಮ್ ಇಂಡಿಯಾ ಕಪ್ತಾನ ರೋಹಿತ್ ಶರ್ಮಾ ಅವರೊಂದಿಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ರೋಹಿತ್ ಜತೆಗಿನ ಚಿತ್ರ ಹಂಚಿಕೊಂಡಿರುವ ರಶೀದ್, 'ಬಂಬೈಸೆ ಆಯಾ ಮೇರಾ ದೋಸ್ತ್', ಜನಪ್ರಿಯ ಹಿಂದಿ ಚಿತ್ರದ ಸಾಲನ್ನು ಬರೆದುಕೊಂಡಿದ್ದಾರೆ.

ಸೂಪರ್ ಎಂಟರ ಹಂತದ ಮೊದಲ ಗುಂಪಿನಲ್ಲಿ ಭಾರತ ಹಾಗೂ ಅಫ್ಗಾನಿಸ್ತಾನ ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಿವೆ. ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ತಂಡಗಳು ನಿರ್ಗಮಿಸಿವೆ.

ಮತ್ತೊಂದೆಡೆ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ದಾಖಲಿಸಿತ್ತು. ಒಂದು ವೇಳೆ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅಫ್ಗಾನಿಸ್ತಾನ ಸೋತಿದ್ದರೆ ಆಸ್ಟ್ರೇಲಿಯಾ ಸೆಮಿಫೈನಲ್‌ಗೆ ಪ್ರವೇಶಿಸುತ್ತಿತ್ತು.

ರಶೀದ್ ಖಾನ್ ಭಾರತದಲ್ಲಿ ಅಪಾರ ಅಭಿಮಾನಿಗಳ ಬಳಗವನ್ನು ಕಟ್ಟಿಕೊಂಡಿದ್ದಾರೆ. ಟೀಮ್ ಇಂಡಿಯಾದ ಆಟಗಾರರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.

ಅಲ್ಲದೆ ರಶೀದ್ ಸೇರಿದಂತೆ ಅಫ್ಗನ್‌ ತಂಡದಲ್ಲಿರುವ ಬಹುತೇಕ ಆಟಗಾರರು ಐಪಿಎಲ್‌ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಅಫ್ಗಾನಿಸ್ತಾನದಲ್ಲಿ ಕ್ರಿಕೆಟ್ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಬಿಸಿಸಿಐ ಮಹತ್ವದ ಪಾತ್ರ ವಹಿಸಿದೆ ಎನ್ನಲಾಗಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿದ ಖುಷಿಯನ್ನು ರೋಹಿತ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕಳೆದ ವರ್ಷ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದ ಭಾರತದ ಕನಸು ಭಗ್ನಗೊಂಡಿತ್ತು. ಇದೇ ಟೂರ್ನಿಯಲ್ಲಿ ಅಫ್ಗಾನಿಸ್ತಾನ ವಿರುದ್ಧವೂ ಗ್ಲೆನ್ ಮ್ಯಾಕ್ಸ್‌ವೆಲ್ ಅಮೋಘ ದ್ವಿಶತಕದ ನೆರವಿನಿಂದ ಆಸ್ಟ್ರೇಲಿಯಾ ಜಯ ಗಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT