ದುಬೈ: ‘ಟಿ–20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಆಟಗಾರರೇ ಹೆಚ್ಚು ರನ್ ಮತ್ತು ವಿಕೆಟ್ ಪಡೆಯಲಿದ್ದಾರೆ’ ಎಂದು ಆಸ್ಟೇಲಿಯಾದ ಮಾಜಿ ಕ್ರಿಕೆಟಿಗ ಬ್ರೆಟ್ ಲೀ ಭವಿಷ್ಯ ನುಡಿದಿದ್ದಾರೆ.

‘ಭಾರತದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಅವರು ವಿಶ್ವಕಪ್ ಟೂರ್ನಿಯಲ್ಲಿ ಹೆಚ್ಚು ರನ್ ಗಳಿಸಬಹುದು. ಜತೆಗೆ, ವೇಗಿ ಮೊಹಮ್ಮದ್ ಶಮಿ ಅವರು ಹೆಚ್ಚು ವಿಕೆಟ್ ಪಡೆಯಲಿದ್ದಾರೆ’ ಎಂದು ಐಸಿಸಿ ಅಂಕಣದಲ್ಲಿ ಬ್ರೇಟ್ ಲೀ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

‘ಇತ್ತೀಚೆಗಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿ ಮುಕ್ತಾಯಗೊಂಡಿದ್ದು, ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿಂದತೆ ಹಲವು ಅನುಭವಿ ಆಟಗಾರರಿದ್ದಾರೆ. ಇದರಿಂದಾಗಿ ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ’ ಎಂದು ಹೇಳಿದ್ದಾರೆ.

ಅಕ್ಟೋಬರ್ 24ರಂದು ಭಾನುವಾರ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ. ಈ ರೋಚಕ ಪಂದ್ಯವನ್ನು ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತ್ತು.

ಇದನ್ನೂ ಓದಿ... T20WC: ಆತನಿಂದ ಪಾಕಿಸ್ತಾನಕ್ಕೆ ದೊಡ್ಡ ಅಪಾಯವಿದೆ- ಹೇಡನ್ ಹೇಳಿದ್ದು ಯಾರ ಬಗ್ಗೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.