ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20 World Cup | ಭಾರತ–ಪಾಕಿಸ್ತಾನ ಫೈನಲ್ ನೋಡುವ ಬಯಕೆ ಎಲ್ಲರದ್ದು: ವಾಟ್ಸನ್

Last Updated 7 ನವೆಂಬರ್ 2022, 13:17 IST
ಅಕ್ಷರ ಗಾತ್ರ

ಸಿಡ್ನಿ: ಭಾರತ ಮತ್ತು ಪಾಕಿಸ್ತಾನ ಈ ಬಾರಿಯ ಟಿ20 ಕ್ರಿಕೆಟ್ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿವೆ. ಈ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುವ ಸಾಧ್ಯತೆ ಇದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್‌ ವಾಟ್ಸನ್‌ ಅಭಿಪ್ರಾಯಪಟ್ಟಿದ್ದಾರೆ.

ಸೂಪರ್‌ 12ರ ಹಂತದಲ್ಲಿ ಒಂದೇ (ಬಿ) ಗುಂಪಿನಲ್ಲಿ ಆಡಿರುವ ಭಾರತ ಮತ್ತು ಪಾಕಿಸ್ತಾನ, 'ಎ' ಗುಂಪಿನಿಂದ ನಾಕೌಟ್‌ ತಲುಪಿರುವ ನ್ಯೂಜಿಲೆಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧ ಸೆಣಸಾಟ ನಡೆಸಲಿವೆ.

ಮೊದಲ ಸೆಮಿಫೈನಲ್‌ ನವೆಂಬರ್‌ 9 ಸಿಡ್ನಿಯಲ್ಲಿ ಮತ್ತು ಎರಡನೇ ಸೆಮಿಫೈನಲ್‌ ನವೆಂಬರ್‌ 10 ರಂದು ಅಡಿಲೇಡ್‌ನಲ್ಲಿ ನಡೆಯಲಿವೆ.

ನ್ಯೂಜಿಲೆಂಡ್‌ ಹಾಗೂ ಪಾಕಿಸ್ತಾನಮೊದಲ ಸೆಮಿಫೈನಲ್‌ನಲ್ಲಿ ಸೆಣಸಿದರೆ, ಭಾರತ ಹಾಗೂ ಇಂಗ್ಲೆಂಡ್‌ ಎರಡನೇ ಸೆಮಿಫೈನಲ್‌ನಲ್ಲಿ ಪೈಪೋಟಿ ನಡೆಸಲಿವೆ. ಈ ಪಂದ್ಯಗಳಲ್ಲಿ ಗೆಲ್ಲುವವರು ನವೆಂಬರ್‌ 13ರಂದು ಮೆಲ್ಬರ್ನ್‌ನಲ್ಲಿ ನಡೆಯುವ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ.

ಫೈನಲ್‌ ಪಂದ್ಯದ ಕುರಿತು ಟಿ20 ವಿಶ್ವಕಪ್‌ ಟೂರ್ನಿಯ ಅಧಿಕೃತ ವೆಬ್‌ಸೈಟ್‌ಗೆ ಮಾತನಾಡಿರುವ ವಾಟ್ಸನ್‌, 'ಭಾರತ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮುಖಾಮುಖಿಯಾಗುವುದನ್ನು ನೋಡಲು ಎಲ್ಲರೂ ಬಯಸುತ್ತಾರೆ. ದುರದೃಷ್ಟವಶಾತ್‌, ಉಭಯ ತಂಡಗಳ ಮೊದಲ (ಸೂಪರ್‌ 12 ಹಂತದ) ಪಂದ್ಯವನ್ನು ಮೆಲ್ಬರ್ನ್‌ನಲ್ಲಿ ನೋಡಲು ಸಾಧ್ಯವಾಗಿರಲಿಲ್ಲ.ಆದರೆ,ಪಂದ್ಯ ವಿಶೇಷವಾಗಿತ್ತು ಎಂದು ವರದಿಗಳು ಉಲ್ಲೇಖಿಸಿದ್ದವು. ಟಿವಿಯಲ್ಲಿ ನೋಡುವುದೂಅಮೋಘವಾಗಿತ್ತು ಜನರು ಹೇಳಿದ್ದರು. ಭಾರತ ಮತ್ತು ಪಾಕಿಸ್ತಾನ 2007ರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಅದೇರೀತಿ ಈ ತಂಡಗಳು ಮತ್ತೊಮ್ಮೆ ಸೆಣಸಾಟ ನಡೆಸುವುದನ್ನು ನೋಡಲು ಪ್ರತಿಯೊಬ್ಬರೂ ಬಯಸುತ್ತಿದ್ದಾರೆ' ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಅಕ್ಟೋಬರ್‌ 23ರಂದು ನಡೆದ 'ಸೂಪರ್‌ 12' ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 159ರನ್‌ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ ಭಾರತ ಕೊನೇ ಎಸೆತದಲ್ಲಿ ಗೆಲುವು ಸಾಧಿಸಿತ್ತು.

ಅಮೋಘ ಪ್ರದರ್ಶನ ತೋರಿದ್ದ ವಿರಾಟ್‌ ಕೊಹ್ಲಿ, ಕೊನೆವರೆಗೂ ಹೋರಾಡಿದ್ದರು. ಕೇವಲ 53 ಎಸೆತಗಳಲ್ಲಿ 82 ರನ್ ಸಿಡಿಸಿ ಜಯ ತಂದುಕೊಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT