ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20 World Cup: ಕೊಹ್ಲಿ, ರಾಹುಲ್ ಫಿಫ್ಟಿ; ಬಾಂಗ್ಲಾ ಗೆಲುವಿಗೆ 185 ರನ್ ಗುರಿ

Last Updated 2 ನವೆಂಬರ್ 2022, 9:59 IST
ಅಕ್ಷರ ಗಾತ್ರ

ಅಡಿಲೇಡ್: ವಿರಾಟ್ ಕೊಹ್ಲಿ (64*) ಹಾಗೂ ಕೆ.ಎಲ್. ರಾಹುಲ್ (50*) ಅಮೋಘ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ, ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್‌ ಟೂರ್ನಿಯಲ್ಲಿ ಬಾಂಗ್ಲಾದೇಶದ ಗೆಲುವಿಗೆ 185 ರನ್‌ಗಳ ಸವಾಲಿನ ಗುರಿ ಒಡ್ಡಿದೆ.

ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡವು ಆರು ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು.

ಮಗದೊಮ್ಮೆ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ 44 ಎಸೆತಗಳಲ್ಲಿ 64 ರನ್ ಗಳಿಸಿ ಔಟಾಗದೆ ಉಳಿದರು. ಮಾಜಿ ನಾಯಕನ ಇನ್ನಿಂಗ್ಸ್‌ನಲ್ಲಿ ಎಂಟು ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿದ್ದವು. ಅಲ್ಲದೆ ಟ್ವೆಂಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ದಾಖಲೆಗೆ ಭಾಜನರಾಗಿದ್ದಾರೆ.

ಮತ್ತೊಂದೆಡೆ ಫಾರ್ಮ್‌ಗೆ ಮರಳಿದ ರಾಹುಲ್ 50 ರನ್ ಗಳಿಸಿದರು. 32 ಎಸೆತಗಳನ್ನು ಎದುರಿಸಿದ ರಾಹುಲ್ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಬಾರಿಸಿದರು.

ನಾಯಕ ರೋಹಿತ್ ಶರ್ಮಾ (2) ವೈಫಲ್ಯವನ್ನು ಅನುಭವಿಸಿದರು.

ಇದೀಗಷ್ಟೇ ಟ್ವೆಂಟಿ-20 ಬ್ಯಾಟಿಂಗ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಪಟ್ಟ ಅಲಂಕರಿಸಿರುವ ಸೂರ್ಯಕುಮಾರ್ ಯಾದವ್ 30 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದರು. 16 ಎಸೆತಗಳನ್ನು ಎದುರಿಸಿದ ಸೂರ್ಯ ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿಗಳು ಸೇರಿದ್ದವು.

ಕೊನೆಯ ಹಂತದಲ್ಲಿ ರವಿಚಂದ್ರನ್ ಅಶ್ವಿನ್ (ಅಜೇಯ 13 ರನ್, 6 ಎಸೆತ, 1 ಸಿಕ್ಸರ್, 1 ಬೌಂಡರಿ) ಮಿಂಚಿದರು. ಇನ್ನುಳಿದಂತೆ ಹಾರ್ದಿಕ್ ಪಾಂಡ್ಯ (5), ದಿನೇಶ್ ಕಾರ್ತಿಕ್ (7), ಅಕ್ಷರ್ ಪಟೇಲ್ (7) ನಿರಾಸೆ ಮೂಡಿಸಿದರು.

ಬಾಂಗ್ಲಾ ಪರ ಹಸನ್ ಮಹಮೂದ್ ಮೂರು ಮತ್ತು ನಾಯಕ ಶಕಿಬ್ ಅಲ್ ಹಸನ್ ಎರಡು ವಿಕೆಟ್ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT