ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ–20 ವಿಶ್ವಕಪ್‌: ಇಂಡೋ –ಪಾಕ್‌ ಪಂದ್ಯದ ಬಗ್ಗೆ ಸೆಹ್ವಾಗ್ ಹೇಳಿದ್ದೇನು?

Last Updated 21 ಅಕ್ಟೋಬರ್ 2021, 10:24 IST
ಅಕ್ಷರ ಗಾತ್ರ

ನವದೆಹಲಿ: ‘ಟಿ–20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಕಡಿಮೆ ಒತ್ತಡದಲ್ಲಿ ಆಡಲಿದೆ’ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಹೇಳಿದ್ದಾರೆ.

ಖಾಸಗಿ ವಾಹಿನಿವೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ‘ಅ.24ರಂದು ದುಬೈನಲ್ಲಿ ನಡೆಯಲಿರುವ ಭಾರತ– ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರಿ ಪೈಪೋಟಿ ನಿರೀಕ್ಷೆ ಮಾಡಬಹುದಾಗಿದೆ’ ಎಂದು ಹೇಳಿದ್ದಾರೆ.

‘ಪಾಕಿಸ್ತಾನದ ವಿರುದ್ಧ ಭಾರತ ಯಾವಾಗಲೂ ಕಡಿಮೆ ಒತ್ತಡದಲ್ಲಿ ಆಡುತ್ತದೆ. ಅದನ್ನು ಈ ಬಾರಿಯೂ ಮುಂದುವರಿಸಲಿದೆ. ಜತೆಗೆ ಕಳೆದ ವಿಶ್ವಕಪ್‌ಗಳಲ್ಲಿನ ಉಭಯ ತಂಡಗಳ ಪ್ರದರ್ಶನವನ್ನು ಗಮನಿಸಿದರೆ ಭಾರತ ಉತ್ತಮ ಸ್ಥಿತಿಯಲ್ಲಿದೆ’ ಎಂದಿದ್ದಾರೆ.

‘ಇಂಡಿಯಾ– ಪಾಕ್‌ ಪಂದ್ಯಕ್ಕೂ ಮುನ್ನ ಭಿನ್ನವಾದ ಹೇಳಿಕೆಗಳನ್ನು ನೀಡುವುದು ಅಲ್ಲಿನ ಜನರಿಗೆ ಅಭ್ಯಾಸವಾಗಿದೆ. ಆದರೆ ನಮ್ಮವರು ಯಾವುದೇ ರೀತಿಯ ಹೇಳಿಕೆಗಳನ್ನು ನೀಡುವುದಿಲ್ಲ. ಬದಲಿಗೆ ಟೀಕೆಗಳಿಗೆ ಫಲಿತಾಂಶದ ಮೂಲಕ ತಕ್ಕ ಉತ್ತರ ನೀಡುತ್ತಾರೆ’ ಎಂದು ಸೆಹ್ವಾಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT