ದೆಹಲಿ: ಐಸಿಸಿ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆತಿಥೇಯ ಭಾರತ ತಂಡವು ಸತತ ಎರಡನೇ ಗೆಲುವು ಸಾಧಿಸಿದೆ.

ಇಂದು (ಗುರುವಾರ) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನಮೀಬಿಯಾ ವಿರುದ್ಧ 93 ರನ್ ಅಂತರದ ಗೆಲುವು ದಾಖಲಿಸಿತು.

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಒಂಬತ್ತು ವಿಕೆಟ್ ನಷ್ಟಕ್ಕೆ 209 ರನ್ಗಳ ಸವಾಲಿನ ಮೊತ್ತ ಪೇರಿಸಿತು. ಈ ಗುರಿ ಬೆನ್ನಟ್ಟಿದ ನಮೀಬಿಯಾ 18.2 ಓವರ್ಗಳಲ್ಲಿ 116 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು.

ಭಾರತದ ಪರ ಬಿರುಸಿನ ಅರ್ಧಶತಕಗಳನ್ನು ಗಳಿಸಿದ ಇಶಾನ್ ಕಿಶನ್ (61) ಹಾಗೂ ಹಾರ್ದಿಕ್ ಪಾಂಡ್ಯ (52) ಗಮನ ಸೆಳೆದರು. ಈ ಪೈಕಿ ಇಶಾನ್ ಕೇವಲ 20 ಎಸೆತಗಳಲ್ಲೇ ಅರ್ಧಶತಕ ಗಳಿಸಿದರು.

ಬೌಲಿಂಗ್ನಲ್ಲಿ ಮಿಂಚಿದ ವರುಣ್ ಚಕ್ರವರ್ತಿ ಮೂರು ಮತ್ತು ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕಟ್ ಗಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.