ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

T20 WC: ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದ ಭಾರತ; ಟ್ರೋಲ್ ಸುರಿಮಳೆ

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ. ಭಾನುವಾರ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ದಾಖಲಿಸುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ.

ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು.

ಹಾಗಾಗಿ ಸೋಮವಾರ ನಮೀಬಿಯಾ ವಿರುದ್ಧ ನಡೆಯಲಿರುವ ಪಂದ್ಯವು ವಿರಾಟ್ ಕಪ್ತಾನಗರಿಯಲ್ಲಿ ಭಾರತದ ಪಾಲಿಗೆ ಕೊನೆಯ ಪಂದ್ಯವಾಗಿದೆ.

ಏತನ್ಮಧ್ಯೆ ಅಫ್ಗನ್ ವಿರುದ್ಧ ನ್ಯೂಜಿಲೆಂಡ್ ಜಯ ಗಳಿಸಿದ್ದಂತೆ ಟೀಮ್ ಇಂಡಿಯಾ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳ ಅಭಿಷೇಕವಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT