ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20 WC: ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯಲು ಹರ್ಭಜನ್ ಸಿಂಗ್ ಹೇಳಿದ್ದು ಯಾರಿಗೆ?

Last Updated 29 ಅಕ್ಟೋಬರ್ 2021, 7:02 IST
ಅಕ್ಷರ ಗಾತ್ರ

ನವದೆಹಲಿ: ಟಿ–20 ವಿಶ್ವಕಪ್‌ನಲ್ಲಿ ಅ.31ರಂದು ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಇಶಾನ್‌ ಕಿಶನ್‌ ಅವರನ್ನು ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವಂತೆ ಮಾಜಿ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಸಲಹೆ ನೀಡಿದ್ದಾರೆ.

ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಅವರು, ‘ಇಶಾನ್ ಕಿಶನ್ ಅವರು ‘ಪವರ್‌ ಪ್ಲೇ’ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ. ಹಾಗಾಗಿ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸುವುದು ಸೂಕ್ತ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

‘ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಆಡುವುದು ಅಗತ್ಯವಿದೆ. ಇದು ತಂಡಕ್ಕೆ ಅತಿ ಮುಖ್ಯ ಎಂದು ನಾನು ಭಾವಿಸುತ್ತೇನೆ. ಜತೆಗೆ, ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಆರಂಭಿಕರಾಗಿ ಆಡಬೇಕು. ಈ ಇಬ್ಬರ ಜೊತೆಯಾಟದಿಂದ ಭಾರತಕ್ಕೆ ಉತ್ತಮ ಆರಂಭ ದೊರಯಲಿದೆ. ಕಿಶನ್ ಆರು ಓವರ್‌ಗಳನ್ನು ಆಡಿದರೆ ತಂಡದ ಮೊತ್ತ 60-70 ರನ್‌ ಎಂದು ನಿರೀಕ್ಷಿಸಬಹುದು. ಇಶಾನ್ ಕ್ರೀಸ್‌ನಲ್ಲಿ ಇರುವವರೆಗೂ ಎದುರಾಳಿ ತಂಡದ ಬೌಲರ್ಗಳು ಒತ್ತಡದಲ್ಲಿರುತ್ತಾರೆ’ ಎಂದು ಹರ್ಭಜನ್ ಹೇಳಿದರು.

ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಕೆ.ಎಲ್. ರಾಹುಲ್, 5ನೇ ಕ್ರಮಾಂಕದಲ್ಲಿ ರಿಷಬ್ ಪಂತ್, 6ನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಆಡುವುದು ಸೂಕ್ತ ಎಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಅ.24ರಂದು ನಡೆದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು. ಇದರಿಂದಾಗಿ ಟೀಕೆಗೆ ಗುರಿಯಾಗಿರುವ ಕೊಹ್ಲಿ ಪಡೆಗೆ ನ್ಯೂಜಿಲೆಂಡ್‌ ವಿರುದ್ದದ ಪಂದ್ಯ ನಿರ್ಣಾಯಕವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT