ಕೋಲ್ಕತ್ತ: ಇಲ್ಲಿನ ಈಡೆನ್ ಗಾರ್ಡನ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ ಸೂಪರ್–8ರ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 20 ಓವರ್ಗಳಲ್ಲಿ 195 ರನ್ ಕಲೆಹಾಕಿದೆ. ಆ ಮೂಲಕ ಭಾರತದ ಗೆಲುವಿಗೆ 196 ರನ್ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡಕ್ಕೆ ನಾಯಕ ಶಾಯ್ ಹೋಪ್ ಹಾಗೂ ರೋಸ್ಟನ್ ಚೇಸ್ ಉತ್ತಮ ಆರಂಭ ನೀಡಿದರು. ಬಳಿಕ ಜಸ್ಪ್ರೀತ್ ಬುಮ್ರಾ ಅವರು ಒಂದೇ ಓವರ್ನಲ್ಲಿ ಹೆಟ್ಮೇಯರ್ ಹಾಗೂ ಚೇಸ್ ಅವರ ವಿಕೆಟ್ ಪಡೆಯುವ ಮೂಲಕ ವಿಂಡೀಸ್ ರನ್ ವೇಗಕ್ಕೆ ಕಡಿವಾಣ ಹಾಕಿದರು.

ಆದರೆ, ನಂತರ ಬಂದ ಜೇಸನ್ ಹೋಲ್ಡರ್ ಹಾಗೂ ರೋವ್ಮನ್ ಪೋವೆಲ್ ಭಾರತೀಯ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಈ ಜೋಡಿ ಮುರಿಯದ 76 ರನ್ಗಳ ಜೊತೆಯಾಟ ಆಡಿದರು. ಈ ವೇಳೆ ಹೋಲ್ಡರ್ ( ಅಜೇಯ 37 ರನ್) ಹಾಗೂ ರೋವ್ಮನ್ ಪೋವೆಲ್ (ಅಜೇಯ 34 ರನ್) ಬಾರಿಸಿದರು.

ಭಾರತದ ಪರ ಅಮೋಘ ಬೌಲಿಂಗ್ ಪ್ರದರ್ಶಿಸಿದ ಜಸ್ಪ್ರೀತ್ ಬುಮ್ರಾ 2 ವಿಕೆಟ್, ಹಾರ್ದಿಕ್ ಪಾಂಡ್ಯ ಹಾಗೂ ವರುಣ್ ಚಕ್ರವರ್ತಿ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.