ಮುಂಬೈ: ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಇಲ್ಲಿನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ 254 ರನ್ಗಳ ಬೃಹತ್ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ (9 ರನ್) ಬೇಗನೆ ವಿಕೆಟ್ ಒಪ್ಪಿಸಿ ಹೊರನಡೆದರು.

ನಂತರ ಜೊತೆಯಾದ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಇಂಗ್ಲೆಂಡ್ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಇಶಾನ್ ಕಿಶನ್ ( 39 ರನ್), ಸಂಜು ಸ್ಯಾಮ್ಸನ್ (89 ರನ್) ಗಳಿಸುವ ಮೂಲಕ ಭಾರತವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ನಂತರದ ಬಂದ ಶಿವಂ ದುಬೆ (43 ರನ್), ತಿಲಕ್ ವರ್ಮಾ (27 ರನ್), ಹಾರ್ದಿಕ್ ಪಾಂಡ್ಯ (27 ರನ್) ಸಿಡಿಸುವ ಮೂಲಕ ಭಾರತದ ಮೊತ್ತವನ್ನು 253ಕ್ಕೆ ಹೆಚ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.