ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

T20 World Cup | ಕಮಿನ್ಸ್ ಹ್ಯಾಟ್ರಿಕ್ ಸಾಧನೆ; ಬಾಂಗ್ಲಾ ಮಣಿಸಿದ ಆಸೀಸ್

Published 21 ಜೂನ್ 2024, 5:48 IST
Last Updated 21 ಜೂನ್ 2024, 5:48 IST
ಅಕ್ಷರ ಗಾತ್ರ

ಆ್ಯಂಟಿಗುವಾ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್ ಎಂಟರ ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ನಾಯಕ ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಸಾಧನೆ ನೆರವಿನಿಂದ ಆಸ್ಟ್ರೇಲಿಯಾ ತಂಡವು ಬಾಂಗ್ಲಾದೇಶ ವಿರುದ್ಧ ನಡೆದ ಮಳೆ ಬಾಧಿತ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದಡಿಯಲ್ಲಿ 28 ರನ್ ಅಂತರದ ಜಯ ಗಳಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ಎಂಟು ವಿಕೆಟ್ ನಷ್ಟಕ್ಕೆ 140 ರನ್ ಗಳಿಸಲಷ್ಟೇ ಸಾಧ್ಯವಾಯಿತು. ನಾಯಕ ನಜ್ಮುಲ್ ಹೊಸೈನ್ ಶಾಂಟೊ 41 ಹಾಗೂ ತೌಹಿದ್ ಹೃದೋಯ್ 40 ರನ್ ಗಳಿಸಿದರು.

ಆಸ್ಟ್ರೇಲಿಯಾದ ಪರ ನಾಯಕ ಪ್ಯಾಟ್ ಕಮಿನ್ಸ್, ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದರು. 29 ರನ್ ತೆತ್ತ ಕಮಿನ್ಸ್ ಮೂರು ವಿಕೆಟ್ ಗಳಿಸಿದರು. ಸ್ಪಿನ್ನರ್ ಆ್ಯಡಂ ಜಂಪಾ ಎರಡು ವಿಕೆಟ್ ಗಳಿಸಿ ಮಿಂಚಿದರು.

ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 60 ರನ್ ಗಳಿಸಿದ್ದ ಸಂದರ್ಭದಲ್ಲಿ ಮಳೆಯಿಂದಾಗಿ ಮೊದಲ ಸಲ ಪಂದ್ಯ ಸ್ಥಗಿತಗೊಂಡಿತ್ತು. ಎರಡನೇ ಬಾರಿ ಮಳೆಯಿಂದಾಗಿ ಪಂದ್ಯ ನಿಲುಗಡೆಗೊಂಡಾಗ ಆಸೀಸ್ 11.2 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿತು. ಬಳಿಕ ಪಂದ್ಯ ಮುಂದುವರಿಸಲು ಸಾಧ್ಯವಾಗಲಿಲ್ಲ.

ತಮ್ಮ ಕೊನೆಯ ವಿಶ್ವಕಪ್ ಆಡುತ್ತಿರುವ ಡೇವಿಡ್ ವಾರ್ನರ್ 35 ಎಸೆತಗಳಲ್ಲಿ ಅಜೇಯ 53 ರನ್ ಗಳಿಸಿದರು. ಅವರ ಬಿರುಸಿನ ಇನಿಂಗ್ಸ್‌ನಲ್ಲಿಐದು ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳು ಸೇರಿದ್ದವು.

ನಾಯಕ ಮಿಷೆಲ್ ಮಾರ್ಷ್ (1) ನಿರಾಸೆ ಮೂಡಿಸಿದರು. ಟ್ರಾವಿಸ್ ಹೆಡ್ 31 ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ 14 ರನ್ ಗಳಿಸಿದರು. ಬಾಂಗ್ಲಾ ಪರ ರಿಶಾದ್ ಹೊಸೈನ್ ಎರಡು ವಿಕೆಟ್ ಗಳಿಸಿದರು.

ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಸಾಧನೆ: ಇಲ್ಲಿ ವೀಕ್ಷಿಸಿ

ಡೇವಿಡ್ ವಾರ್ನರ್ ಅಬ್ಬರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT