ಶನಿವಾರ, ಅಕ್ಟೋಬರ್ 23, 2021
24 °C

T20 WC: ಆಸೀಸ್, ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯ ಆಡಲಿರುವ ಭಾರತ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬರುವ ಟ್ವೆಂಟಿ-20 ವಿಶ್ವಕಪ್‌ ಪೂರ್ವಭಾವಿಯಾಗಿ ನಡೆಯಲಿರುವ ಅಭ್ಯಾಸ ಪಂದ್ಯಗಳಲ್ಲಿ ಭಾರತ ತಂಡವು ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಸವಾಲುಗಳನ್ನು ಎದುರಿಸಲಿವೆ.

ಭಾರತ ಆತಿಥ್ಯ ವಹಿಸುತ್ತಿರುವ ಟಿ20 ವಿಶ್ವಕಪ್, ಕೋವಿಡ್‌ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ) ಹಾಗೂ ಒಮಾನ್‌ನಲ್ಲಿ ಆಯೋಜನೆಯಾಗುತ್ತಿವೆ. ಇದರಂತೆ ಅಭ್ಯಾಸ ಪಂದ್ಯಗಳ ವಿವರವನ್ನು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: 

ಈಗಾಗಲೇ ಟ್ವೆಂಟಿ-20 ವಿಶ್ವಕಪ್‌ನ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಭಾರತವು ತನ್ನ ಮೊದಲ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಸವಾಲನ್ನು ಎದುರಿಸಲಿದೆ.

 

 

 

ಈ ರೋಚಕ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ಹಾಗೂ ಆಸೀಸ್ ವಿರುದ್ಧ ನಡೆಯಲಿರುವ ಅಭ್ಯಾಸ ಪಂದ್ಯಗಳು ಟೀಮ್ ಇಂಡಿಯಾಗೆ ನೆರವಾಗುವ ಭರವಸೆಯಿದೆ.

 

ವಿರಾಟ್ ಕೊಹ್ಲಿ ಬಳಗವು, ಅಕ್ಟೋಬರ್ 18 ಹಾಗೂ 20ರಂದು ಕ್ರಮವಾಗಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಆಡಲಿವೆ. 

ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೂ ಟಿ20 ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಅರ್ಹತೆಗಾಗಿ ಎಂಟು ತಂಡಗಳು ಮೊದಲ ಸುತ್ತಿನಲ್ಲಿ ಸೆಣಸಲಿವೆ. ಅಕ್ಟೋಬರ್ 17ರಿಂದ 22ರ ವರೆಗೆ ಆರಂಭಿಕ ಹಂತದ ಪಂದ್ಯಗಳು ನಡೆಯಲಿವೆ. ಇಲ್ಲಿ ಎಂಟು ತಂಡಗಳ ಪೈಕಿ ನಾಲ್ಕು ತಂಡಗಳು 'ಸೂಪರ್ 12' ಹಂತಕ್ಕೆ ಅರ್ಹತೆಯನ್ನು ಪಡೆಯುತ್ತವೆ. ಆ ತಂಡಗಳು ಈಗಾಗಲೇ ಅರ್ಹತೆ ಪಡೆದ ಎಂಟು ತಂಡಗಳೊಂದಿಗೆ ಸೇರಲಿವೆ. 

'ಸೂಪರ್ 12' ಹಂತದ ಗ್ರೂಪ್ 2ರಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳಿವೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ಅಕ್ಟೋಬರ್ 24ರಂದು ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು