ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20WC: ಬಾಂಗ್ಲಾಕ್ಕೆ 'ಸೂಪರ್' ಗೆಲುವು; ಪಪುವಾ ನ್ಯೂಗಿನಿ ಗುಡ್ ಬೈ

Last Updated 21 ಅಕ್ಟೋಬರ್ 2021, 14:33 IST
ಅಕ್ಷರ ಗಾತ್ರ

ಅಲ್ ಅಮೆರತ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ 'ಬಿ' ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ಪಪುವಾ ನ್ಯೂಗಿನಿ ವಿರುದ್ಧ ಬಾಂಗ್ಲಾದೇಶ 84 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ 'ಸೂಪರ್-12' ಹಂತಕ್ಕೆ ಲಗ್ಗೆಯಿಟ್ಟಿದೆ. ಸ್ಕಾಟ್ಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಬಾಂಗ್ಲಾದೇಶ ಬಳಿಕದ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಅಲ್ಲದೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ನಾಯಕ ಮೆಹಮುದುಲ್ಲಾ ಬಿರುಸಿನ ಅರ್ಧಶತಕದ (50) ನೆರವಿನಿಂದ ಏಳು ವಿಕೆಟ್ನಷ್ಟಕ್ಕೆ 181 ರನ್‌‌ಗಳ ಸವಾಲಿನ ಮೊತ್ತ ಪೇರಿಸಿತ್ತು.

ಬಳಿಕ ಗುರಿ ಬೆನ್ನತ್ತಿದ ಪಪುವಾ ನ್ಯೂಗಿನಿ, 19.3 ಓವರ್‌ಗಳಲ್ಲಿ 97 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಂಡಿತು. ಈ ಮೂಲಕ ಸತತ ಮೂರನೇ ಸೋಲಿಗೆ ಒಳಗಾಗಿ ವಿಶ್ವಕಪ್ ಅಭಿಯಾನವನ್ನು ಕೊನೆಗೊಳಿಸಿತು.

ಬಾಂಗ್ಲಾ ಪರ ನಾಯಕನ ಆಟವಾಡಿದ ಮೆಹಮುದುಲ್ಲಾ, ಕೇವಲ 27 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು. ಇದು ಪ್ರಸಕ್ತ ಸಾಲಿನ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ ದಾಖಲಾದ ಅತಿ ವೇಗದ ಅರ್ಧಶತಕವಾಗಿದೆ.

ಶಕೀಬ್ ಅಲ್ ಹಸನ್ 46 ಹಾಗೂ ಲಿಟನ್ ದಾಸ್ 29 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದರು. ಕೊನೆಯ ಹಂತದಲ್ಲಿ ಅಫಿಫ್ ಹುಸೇನ್ (21 ರನ್, 14 ಎಸೆತ) ಹಾಗೂ ಮೊಹಮ್ಮದ್ ಸೈಫುದ್ದೀನ್ (19 ರನ್, 6 ಎಸೆತ) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದರು.

ಪಪುವಾ ನ್ಯೂಗಿನಿ 29 ರನ್ನಿಗೆ ಏಳು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕಿಪ್ಲಿನ್ ಡೊರಿಗಾ ಅಜೇಯ 46 ರನ್ ಗಳಿಸಿ (34 ಎಸೆತ)ತಂಡಕ್ಕೆ ಆಸರೆಯಾದರು. ಆದರೂ ಗೆಲುವು ದಾಖಲಿಸಲಾಗಲಿಲ್ಲ.

ಬಾಂಗ್ಲಾದೇಶ ಪರ 9 ರನ್ ತೆತ್ತುನಾಲ್ಕು ವಿಕೆಟ್ ಕಿತ್ತಶಕೀಬ್ ಬೌಲಿಂಗ್‌ನಲ್ಲೂ ಮಿಂಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT