ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ನೀಡಿದ ಟೇಲರ್‌

Last Updated 5 ನವೆಂಬರ್ 2018, 20:10 IST
ಅಕ್ಷರ ಗಾತ್ರ

ಸಿಡ್ನಿ: ಹಿರಿಯ ಆಟಗಾರ ಮಾರ್ಕ್‌ ಟೇಲರ್‌ ಅವರು ಆಸ್ಟ್ರೇಲಿಯಾ ಕ್ರಿಕೆಟ್‌ನ (ಸಿಎ) ನಿರ್ದೇಶಕ ಹುದ್ದೆಗೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್‌ ಪಂದ್ಯದಲ್ಲಿ ನಡೆದಿದ್ದ ಚೆಂಡು ವಿರೂಪ ಪ್ರಕರಣಕ್ಕೆ ಆಸ್ಟ್ರೇಲಿಯಾ ಕ್ರಿಕೆಟ್‌ನ ಧೋರಣೆಗಳೇ ಕಾರಣ ಎಂದು ಸ್ವತಂತ್ರ ಸಮಿತಿಯು ಇತ್ತೀಚೆಗೆ ನೀಡಿದ್ದ ತನಿಖಾ ವರದಿಯಲ್ಲಿ ಉಲ್ಲೇಖಿಸಿತ್ತು. ಇದರ ಹೊಣೆ ಹೊತ್ತು ಹೋದ ವಾರ ಸಿಎ ಮುಖ್ಯಸ್ಥ ಸ್ಥಾನಕ್ಕೆ ಡೇವಿಡ್‌ ಪೀವರ್‌ ರಾಜೀನಾಮೆ ನೀಡಿದ್ದರು. ಈಗ ಟೇಲರ್‌ ಕೂಡಾ ಹುದ್ದೆ ತ್ಯಜಿಸಿದ್ದಾರೆ.

‘ಎಲ್ಲಾ ಆಯಾಮಗಳಿಂದ ಯೋಚಿಸಿಯೇ ರಾಜೀನಾಮೆ ನೀಡುವ ತೀರ್ಮಾನ ಕೈಗೊಂಡಿದ್ದೇನೆ. ಕ್ರಿಕೆಟ್‌ ಆಸ್ಟ್ರೇಲಿಯಾಕ್ಕೆ ಅಂಟಿಕೊಂಡಿರುವ ಕಳಂಕ ಬೇಗನೆ ದೂರವಾಗಬೇಕೆಂಬುದು ನನ್ನ ಆಶಯ’ ಎಂದು ಟೇಲರ್‌ ಹೇಳಿದ್ದಾರೆ.

ಮಾರ್ಕ್‌ ಅವರು ಈ ಹಿಂದೆ ಆಸ್ಟ್ರೇಲಿಯಾ ಟೆಸ್ಟ್‌ ಕ್ರಿಕೆಟ್‌ ತಂಡದ ನಾಯಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT