ನವದೆಹಲಿ: ಅಕ್ಟೋಬರ್ 19 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬುಧವಾರದಂದು ದೆಹಲಿಯಿಂದ ಮೊದಲ ಬ್ಯಾಚ್ನಲ್ಲಿ ಆಟಗಾರರು ಆಸ್ಟ್ರೇಲಿಯಾಗೆ ಪ್ರವಾಸ ಕೈಗೊಂಡರು. ಇದರಲ್ಲಿ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೊತೆ ಇನ್ನೂ ಕೆಲವು ಆಟಗಾರರು ಇದ್ದಾರೆ.

ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೊತೆಗೆ ತಂಡದ ನಾಯಕ ಶುಭಮನ್ ಗಿಲ್, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ, ವೇಗಿಗಳಾದ ಅರ್ಷದೀಪ್ ಸಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ಜೊತೆಗೆ ಇನ್ನೂ ಕೆಲವು ಸಹಾಯಕ ಸಿಬ್ಬಂದಿಗಳು ಹೊರಟಿದ್ದಾರೆ.

ಬುಧವಾರ ಬೆಳಿಗ್ಗೆ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೀಂ ಇಂಡಿಯಾ ಆಟಗಾರರ ತಂಡ ವಿಮಾನದಲ್ಲಿ ಹೊರಟಿದೆ. ಆಟಗಾರರನ್ನು ನೋಡಲು ಬೆಳಗ್ಗೆಯೇ ಅವರ ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ತಂಡ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ಇನ್ನೂ ಕೆಲವು ಆಟಗಾರರು ಇಂದು ಸಂಜೆ ಹೊರಡಲಿದ್ದಾರೆ.

ಭಾರತ ತಂಡ ಅಕ್ಟೋಬರ್ 19 ಪರ್ತ್ನಲ್ಲಿ ತನ್ನ ಮೊದಲ ಪಂದ್ಯ ಆಡಲಿದೆ. ಎರಡು ಮತ್ತು ಮೂರನೇ ಪಂದ್ಯಗಳು ಅಡಿಲೇಡ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.