ಶನಿವಾರ, ಮೇ 28, 2022
30 °C

ಕೊಹ್ಲಿ ಗಮನ ಇನ್ನುಮುಂದೆ ಬ್ಯಾಟಿಂಗ್‌ನತ್ತ: ಬಾಲ್ಯದ ಕೋಚ್‌ ರಾಜ್‌ಕುಮಾರ್‌ ಶರ್ಮಾ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರು ಇನ್ನುಮುಂದೆ ಬ್ಯಾಟಿಂಗ್‌ನತ್ತ ಹೆಚ್ಚು ಗಮನಹರಿಸಲಿದ್ದಾರೆ ಎಂದು ಅವರ ಬಾಲ್ಯದ ಕೋಚ್‌ ರಾಜ್‌ಕುಮಾರ್‌ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್‌ನಲ್ಲಿ ಆಡುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕತ್ವವನ್ನು 2021ರ ಅಕ್ಟೋಬರ್‌ನಲ್ಲಿ ತೊರೆದಿದ್ದ ಕೊಹ್ಲಿ, ಇತ್ತೀಚೆಗೆ (2021ರ ಅಕ್ಟೋಬರ್-ನವೆಂಬರ್‌ನಲ್ಲಿ) ದುಬೈನಲ್ಲಿ ನಡೆದ ಚುಟುಕು ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಬಳಿಕ ಟಿ20 ತಂಡದ ನಾಯಕತ್ವಕ್ಕೆ ವಿದಾಯ ಹೇಳಿದ್ದರು. ನಂತರ ಅವರನ್ನು ಏಕದಿನ ಕ್ರಿಕೆಟ್‌ ತಂಡದ ನಾಯಕತ್ವದಿಂದಲೂ ಕೆಳಗಿಳಿಸಿದ್ದ ಬಿಸಿಸಿಐ, ರೋಹಿತ್‌ ಶರ್ಮಾ ಅವರಿಗೆ ಜವಾಬ್ದಾರಿ ವಹಿಸಿತ್ತು.

ಇದೀಗ, ದಕ್ಷಿಣ ಆಫ್ರಿಕಾದಲ್ಲಿ ಕಳೆದ ವಾರವಷ್ಟೇ ಮುಗಿದ ಟೆಸ್ಟ್‌ ಕ್ರಿಕೆಟ್‌ ಸರಣಿ ಬೆನ್ನಲ್ಲೇ, ಈ ಮಾದರಿಯಲ್ಲೂ ತಂಡದ ಹೊಣೆಯನ್ನು ಕೊಹ್ಲಿ ತ್ಯಜಿಸಿದ್ದಾರೆ. ಈ ಹಿನ್ನಲೆಯಲ್ಲಿ ಶರ್ಮಾ ಹೇಳಿಕೆ ನೀಡಿದ್ದಾರೆ.

ಕೊಹ್ಲಿ ತಮ್ಮ ಅಪಾರ ಅನುಭವದ ಮೂಲಕ ಯುವಕರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

'ಕೊಹ್ಲಿ ಯಾವುದೇ ಒತ್ತಡವಿಲ್ಲದೆ ಮತ್ತು ಎಂದಿನಂತೆ ಆಡಲಿದ್ದಾರೆ ಎಂದು ನಾನು ಭಾವಿಸಿದ್ದೇನೆ. ತಮ್ಮ ಬ್ಯಾಟಿಂಗ್‌ ಅನ್ನು ಆನಂದಿಸುವ, ದೇಶಕ್ಕಾಗಿ ಸಾಕಷ್ಟು ರನ್‌ ಗಳಿಸುವ ಮತ್ತು ಪಂದ್ಯಗಳನ್ನು ಗೆದ್ದುಕೊಡಬಲ್ಲ ಹೊಸ ಕೊಹ್ಲಿಯ ಆಟವನ್ನು ನಾವು ನೋಡಬಹುದಾಗಿದೆ ಎಂದುಕೊಂಡಿದ್ದೇನೆ' ಎಂದು ತಿಳಿಸಿದ್ದಾರೆ.

'ಹಾಗಾಗಿ, ಒಬ್ಬ ಬ್ಯಾಟರ್‌ ಆಗಿ ಮುಂದುವರಿಯಲಿದ್ದು, ತಮ್ಮ ಬ್ಯಾಟಿಂಗ್‌ನತ್ತ ಹೆಚ್ಚು ಗಮನ ಹರಿಸಲಿದ್ದಾರೆ. ಮುಂಬರುವ ದಿನಗಳಲ್ಲಿ ಟೀಂ ಇಂಡಿಯಾದ ಯುವ ನಾಯಕರು ಮತ್ತು ಯುವ ಆಟಗಾರಿಗೆ ನೆರವಾಗಲಿದ್ದಾರೆ. ಅದು ಅವರ ಡಿಎನ್‌ಎದಲ್ಲಿಯೇ ಇದೆ. ಅವರು ಭಾರತ ತಂಡಕ್ಕೆ ನೆರವಾಗಲು ಬಯಸುತ್ತಾರೆ. ಅದಕ್ಕಾಗಿ ಅವರು ಇನ್ನೂ ಹೆಚ್ಚಿನ ಕೊಡುಗೆಯನ್ನು ನೀಡಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು