ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ಕೋಚ್ ದ್ರಾವಿಡ್ ಅವಧಿ ದ.ಆಫ್ರಿಕಾ ಸರಣಿ ಬಳಿಕ ಅಂತಿಮ: ಜಯ್ ಶಾ

Published 10 ಡಿಸೆಂಬರ್ 2023, 9:10 IST
Last Updated 10 ಡಿಸೆಂಬರ್ 2023, 9:10 IST
ಅಕ್ಷರ ಗಾತ್ರ

ಮುಂಬೈ: ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಪುನರಾಯ್ಕೆಯಾಗಿರುವ ರಾಹುಲ್ ದ್ರಾವಿಡ್ ಅವರ ಅವಧಿಯನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಬಳಿಕ ಅಂತಿಮಗೊಳಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ತಿಳಿಸಿದ್ದಾರೆ.

ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಅವರ ಗುತ್ತಿಗೆ ಅವಧಿ ಮುಗಿದಿತ್ತು. ಬಳಿಕ ದ್ರಾವಿಡ್ ಅವರನ್ನೇ ಮುಖ್ಯ ಕೋಚ್ ಆಗಿ ಮುಂದುವರಿಸಲು ಬಿಸಿಸಿಐ ನಿರ್ಧರಿಸಿತ್ತು. ಇದಕ್ಕೆ ದ್ರಾವಿಡ್ ಅವರು ಸಹ ಒಪ್ಪಿಗೆ ಸೂಚಿಸಿದ್ದರು. ಆದರೆ ಅವರ ಅವಧಿ ಎಲ್ಲಿಯವರೆಗೆ ಇರಲಿದೆ ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ.

ಈ ಕುರಿತು ಈಗ ಪ್ರತಿಕ್ರಿಯೆ ನೀಡಿರುವ ಜಯ್ ಶಾ, ಸಮಯದ ಅಭಾವದಿಂದಾಗಿ ಪ್ರಕ್ರಿಯೆ ವಿಳಂಬಗೊಂಡಿತು. ದ್ರಾವಿಡ್ ಹಾಗೂ ತಂಡದೊಂದಿಗೆ ಮಾತುಕತೆ ನಡೆಸಬೇಕಿದೆ. ಕೋಚ್ ಆಗಿ ಮುಂದುವರಿಯಲು ಒಪ್ಪಿದ್ದಾರೆ. ಒಮ್ಮೆ, ದಕ್ಷಿಣ ಆಫ್ರಿಕಾ ಸರಣಿ ಮುಗಿಸಿ ಬಂದ ಬಳಿಕ ಈ ಕುರಿತು ಚರ್ಚಿಸಲಿದ್ದೇವೆ ಎಂದು ಹೇಳಿದ್ದಾರೆ.

ಅಫ್ಗಾನಿಸ್ತಾನ ಸರಣಿಗೆ ಹಾರ್ದಿಕ್ ಮರಳುವ ಸಾಧ್ಯತೆ...

ಏಕದಿನ ವಿಶ್ವಕಪ್ ವೇಳೆ ಗಾಯಗೊಂಡಿದ್ದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಅಫ್ಗಾನಿಸ್ತಾನ ವಿರುದ್ಧದ ಸರಣಿ ವೇಳೆಗೆ ತಂಡಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಜಯ್ ಶಾ ತಿಳಿಸಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನದಲ್ಲಿರುವ ಹಾರ್ದಿಕ್ ಅವರ ಮೇಲೆ ನಿಗಾ ವಹಿಸಿದ್ದೇವೆ. ಆದಷ್ಟು ಬೇಗ ದೈಹಿಕ ಸಾಮರ್ಥ್ಯ ಮರಳಿ ಪಡೆಯಲು ಅವರು ಪರಿಶ್ರಮ ವಹಿಸುತ್ತಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಅಫ್ಗಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಮರಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

2024ರಲ್ಲಿ ಹೊಸ ಎನ್‌ಸಿಎ ಸಿದ್ಧ...

ಬೆಂಗಳೂರು ಹೊರವಲಯದಲ್ಲಿ 40 ಎಕರೆ ಜಾಗದಲ್ಲಿ ನಿರ್ಮಾಣಗೊಂಡಿರುವ ಹೊಸ ಎನ್‌ಸಿಎ ಕೇಂದ್ರ 2024 ಆಗಸ್ಟ್ ವೇಳೆಗೆ ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT