ಮಂಗಳವಾರ, ಮಾರ್ಚ್ 28, 2023
29 °C
ಟಿ20 ವಿಶ್ಕಕಪ್‌: ಭಾರತ ತಂಡದ ಆಯ್ಕೆ ಇಂದು

ಟ್ವೆಂಟಿ–20 ವಿಶ್ವಕಪ್: ಆಲ್‌ರೌಂಡರ್‌ಗಳಿಗೆ ಆದ್ಯತೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮುಂದಿನ ತಿಂಗಳು ಯುನೈಟೆಡ್ ಅರಬ್ ಎಮಿರೆಟ್ಸ್‌ನಲ್ಲಿ ನಡೆಯಲಿರುವ ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಭಾರತ ತಂಡವನ್ನು ಬುಧವಾರ ಆಯ್ಕೆ ಮಾಡುವ ನಿರೀಕ್ಷೆ ಇದೆ.

ಈ ತಂಡದಲ್ಲಿ ಆಲ್‌ರೌಂಡರ್‌ಗಳಿಗೆ ಹೆಚ್ಚು ಸ್ಥಾನಗಳು ಸಿಗುವ ಸಾಧ್ಯತೆ ಇದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ರಾಷ್ಟ್ರೀಯ ಆಯ್ಕೆ ಸಮಿತಿಯು 30 ಆಟಗಾರರ ಸಂಭವನೀಯರ ತಂಡದ ಆಯ್ಕೆ ಮಾಡಲಿದೆ. ಇಂಗ್ಲೆಂಡ್‌ನಲ್ಲಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಅವರು ವಿಡಿಯೊ ಕಾಲ್‌ ಮೂಲಕ ಸಮಿತಿಯೊಂದಿಗೆ ಪಾಲ್ಗೊಳ್ಳುವರು.

ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ರಾಹುಲ್ ಚಾಹರ್ ಅವರಿಗೆ ಸ್ಥಾನ ಸಿಗುವ ಕುರಿತು ಕೇಳಿ ಬರುತ್ತಿದೆ. ಓವಲ್ ಟೆಸ್ಟ್‌ನಲ್ಲಿ ಅಮೋಘವಾಗಿ ಆಡಿರುವ ಶಾರ್ದೂಲ್ ಠಾಕೂರ್,  ಮಧ್ಯಮವೇಗಿ ದೀಪಕ್ ಚಾಹರ್, ರವೀಂದ್ರ ಜಡೇಜ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಅವರು ಸ್ಥಾನ ಪಡೆಯುವವರ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಪರಿಗಣಿಸುವುದು ಖಚಿತವಾಗಿಲ್ಲ. ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್ ಮತ್ತು ಮುಂಬೈನ ಸೂರ್ಯಕುಮಾರ್ ಯಾದವ್ ಅವರಿಗೆ ಸ್ಥಾನ ಸಿಗಬಹುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು