ನವದೆಹಲಿ: ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಸೋಮವಾರ ಪ್ರಕಟಿಸಿದೆ.

ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಭಾರತ ತಂಡದ ಪೂರ್ಣಾವಧಿ ನಾಯಕತ್ವ ವಹಿಸಿಕೊಳ್ಳಲು ಸಿದ್ಧ: ಹಾರ್ದಿಕ್ ಪಾಂಡ್ಯ

ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಬೆನ್ನು ನೋವಿನ ಕಾರಣದಿಂದ ತಂಡದಿಂದ ಹೊರಗುಳಿದಿದ್ದಾರೆ. ಹರ್ಷಲ್ ಪಟೇಲ್ ಕೂಡ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆಗಸ್ಟ್ 27ರಂದು ಆರಂಭಗೊಳ್ಳಲಿದ್ದು, ಭಾರತ ತನ್ನ ಮೊದಲ ಪಂದ್ಯವನ್ನು 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಆರ್.ಬಿಷ್ಣೊಯಿ, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಆವೇಶ್ ಖಾನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.