ಗುರುವಾರ , ಮಾರ್ಚ್ 23, 2023
21 °C

ಸೆಮಿಫೈನಲ್‌ನತ್ತ ಚಿತ್ತ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಬುಧಾಬಿ: ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯ ಮೊದಲ ಗುಂಪಿನ ಬಾಂಗ್ಲಾದೇಶ ತಂಡದ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಟೂರ್ನಿಯಲ್ಲಿ ತಾನಾಡಿದ ಮೊದಲ ಪಂದ್ಯದಲ್ಲಿ ಸೋತರೂ ನಂತರದ ಎರಡು ಪಂದ್ಯಗಳಲ್ಲಿ ಜಯದ ನಗೆ ಬೀರಿರುವ ತೆಂಬಾ ಬವುಮಾ ಬಳಗ ಈ ಪಂದ್ಯದಲ್ಲಿ ಗೆದ್ದರೆ ಸೆಮಿಫೈನಲ್ ಹಾದಿ ಸುಲಭವಾಗಲಿದೆ.

ಆಫ್ರಿಕಾ ತಂಡ ಗುಂಪಿನ ಪಾಯಿಂಟ್ ಪಟ್ಟಿಯಲ್ಲಿ ಈಗ ಎರಡನೇ ಸ್ಥಾನದಲ್ಲಿದೆ. ಆದರೆ, ಆಡಿರುವ ಮೂರೂ ಪಂದ್ಯಗಳಲ್ಲಿ ಸೋಲು ಕಂಡಿರುವ ಬಾಂಗ್ಲಾ ತಂಡ ಕೊನೇ ಸ್ಥಾನದಲ್ಲಿದೆ. 

ಆಫ್ರಿಕಾ ತಂಡ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ. ಆದರೆ, ಬಾಂಗ್ಲಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಗಾಯಾಳು ಶಕೀಬ್ ಅಲ್ ಹಸನ್ ಮತ್ತು ವೇಗಿ ಮುಸ್ತಾಫಿಜುರ್‌ ರಹಮಾನ್‌ ಆಡುತ್ತಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು