ಮಂಗಳವಾರ, ಜನವರಿ 26, 2021
22 °C

ಬಡಮಕ್ಕಳ ಚಿಕಿತ್ಸೆಗೆ ಸಚಿನ್‌ ನೆರವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಅವರು ಬಡ ಕುಟುಂಬಗಳ, ಸರ್ಕಾರಿ ಹಾಗೂ ದತ್ತಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 100 ಮಕ್ಕಳ ಚಿಕಿತ್ಸೆಗೆ ನೆರವಾಗಿದ್ದಾರೆ.

ಏಕಂ ಫೌಂಡೇಷನ್‌ನೊಂದಿಗೆ ಕೈಜೋಡಿಸಿರುವ ಅವರು ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಮಕ್ಕಳಿಗೆ ಅವರು ಸಹಾಯಹಸ್ತ ಚಾಚಿದ್ದಾರೆ. .

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ, ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ವೈದ್ಯಕೀಯ ವೆಚ್ಚವನ್ನು ಭರಿಸಲು ಸಾಧ್ಯವಾಗದ ಮಕ್ಕಳ ನೆರವಿಗೆ ತೆಂಡೂಲ್ಕರ್‌ ಫೌಂಡೇಷನ್‌ ಧಾವಿಸಿದೆ.

ಈ ತಿಂಗಳ ಆರಂಭದಲ್ಲಿ ಅಸ್ಸಾಂನ ಕರೀಮ್‌ಗನಿ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸೌಲಭ್ಯಗಳನ್ನು ಒದಗಿಸಿದ್ದರು. ಪ್ರತಿವರ್ಷ 2,000 ಮಕ್ಕಳಿಗೆ ಇದರಿಂದ ಅನುಕೂಲವಾಗುವ ನಿರೀಕ್ಷೆಯಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು