ಸೋಮವಾರ, ಡಿಸೆಂಬರ್ 6, 2021
23 °C
ಮೊದಲ ಟೆಸ್ಟ್‌ ಪಂದ್ಯ

IND vs NZ Test: ಶುಭಮನ್ ಗಿಲ್ ಅರ್ಧಶತಕ, ಭಾರತ ಉತ್ತಮ ಆರಂಭ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾಗಿರುವ ಟೆಸ್ಟ್‌ನಲ್ಲಿ ಅಜಿಂಕ್ಯ ರಹಾನೆ ನಾಯಕತ್ವದ ಭಾರತ ತಂಡವು ‘ವಿಶ್ವ ಟೆಸ್ಟ್ ಚಾಂಪಿಯನ್’ ನ್ಯೂಜಿಲೆಂಡ್‌ ಸವಾಲು ಎದುರಿಸುತ್ತಿದೆ.

ಕಿವೀಸ್ ವಿರುದ್ಧದ ಟಿ-20 ಸರಣಿಯಲ್ಲಿ ಭಾರತ ಕ್ಲೀನ್‌ಸ್ವೀಪ್ ಮಾಡಲು ಮಾರ್ಗದರ್ಶನ ಮಾಡಿ ಯಶಸ್ವಿಯಾಗಿರುವ ದ್ರಾವಿಡ್, ಈಗ ‘ಟೆಸ್ಟ್‌’ಗೆ ಸಿದ್ಧವಾಗಿದ್ದಾರೆ.

ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ತಂಡ ಮೊದಲ ಟೆಸ್ಟ್ ಪಂದ್ಯ ಆಡುತ್ತಿದೆ.

ಈ ಪಂದ್ಯದಲ್ಲಿ ಭಾರತದ ಪರ ಶ್ರೇಯಸ್ ಅಯ್ಯರ್ ಹಾಗೂ ನ್ಯೂಜಿಲೆಂಡ್‌ ಪರ ರಚಿನ್ ರವೀಂದ್ರ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ಸದ್ಯ ಬ್ಯಾಟಿಂಗ್ ಆರಂಭಿಸಿರುವ ಭಾರತ ಊಟದ ವಿರಾಮದ ವೇಳೆಗೆ 29 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 82 ರನ್ ಗಳಿಸಿದೆ. (ಶುಭಮನ್ ಗಿಲ್ 52*, ಚೇತೇಶ್ವರ್ ಪೂಜಾರ 15* ರನ್‌ ಗಳಸಿ ಕ್ರೀಸ್‌ನಲ್ಲಿದ್ದಾರೆ)

ತಂಡಗಳು:

ಭಾರತ: ಅಜಿಂಕ್ಯ ರಹಾನೆ (ನಾಯಕ), ಮಯಂಕ್ ಅಗರವಾಲ್, ಚೇತೇಶ್ವರ್ ಪೂಜಾರ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್‌ಕೀಪರ್), ರವೀಂದ್ರ ಜಡೇಜ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಉಮೇಶ್ ಯಾದವ್

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲಥಾಮ್, ವಿಲ್ ಯಂಗ್, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್‌ಕೀಪರ್), ರಚಿನ್ ರವೀಂದ್ರ, ಟಿಮ್ ಸೌಥಿ, ಎಜಾಜ್ ಪಟೇಲ್, ಕೈಲ್ ಜೆಮಿಸನ್, ವಿಲ್ ಸೊಮರ್‌ವಿಲ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು