ರ‍್ಯಾಂಕಿಂಗ್‌: ಅಗ್ರಸ್ಥಾನ ಕಾಪಾಡಿಕೊಂಡ ಕೊಹ್ಲಿ

7

ರ‍್ಯಾಂಕಿಂಗ್‌: ಅಗ್ರಸ್ಥಾನ ಕಾಪಾಡಿಕೊಂಡ ಕೊಹ್ಲಿ

Published:
Updated:
Prajavani

ದುಬೈ : ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ, ಐಸಿಸಿ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಉತ್ತಮ ಸಾಮರ್ಥ್ಯ ತೋರಿದ್ದ ಕೊಹ್ಲಿ ಅವರ ಖಾತೆಯಲ್ಲಿ 922 ಪಾಯಿಂಟ್ಸ್‌ ಇವೆ. 897 ಪಾಯಿಂಟ್ಸ್‌ ಹೊಂದಿರುವ ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸ್‌ ಎರಡನೇ ಸ್ಥಾನದಲ್ಲಿದ್ದಾರೆ. ಚೇತೇಶ್ವರ ಪೂಜಾರ ನಂತರದ ಸ್ಥಾನ ಹೊಂದಿದ್ದಾರೆ. ರಿಷಭ್‌ ಪಂತ್‌ ಅವರು 17ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ರವಿಚಂದ್ರನ್‌ ಅಶ್ವಿನ್‌ ಮತ್ತು ರವೀಂದ್ರ ಜಡೇಜ ಕ್ರಮವಾಗಿ ಐದು ಮತ್ತು ಒಂಬತ್ತನೇ ಸ್ಥಾನಗಳಲ್ಲಿದ್ದಾರೆ. ಜಸ್‌ಪ್ರೀತ್‌ ಬೂಮ್ರಾ 15ನೇ ಸ್ಥಾನಕ್ಕೆ ಪ್ರಗತಿ ಕಂಡಿದ್ದಾರೆ.

ತಂಡಗಳ ಪಟ್ಟಿಯಲ್ಲಿ ಭಾರತ, ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಕೊಹ್ಲಿ ಬಳಗದ ಖಾತೆಯಲ್ಲಿ 116 ಪಾಯಿಂಟ್ಸ್‌ ಇವೆ. ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳಲ್ಲಿವೆ.

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !