ಗುರುವಾರ , ಜೂನ್ 30, 2022
24 °C

ಕೋವಿಡ್‌ ಆತಂಕ: ಭಾರತ– ದಕ್ಷಿಣ ಆಫ್ರಿಕಾ ಟೆಸ್ಟ್‌ಗೆ ಪ್ರೇಕ್ಷಕರಿಗಿಲ್ಲ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೊಹಾನ್ಸ್‌ಬರ್ಗ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಇದೇ 26ರಿಂದ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶ ನೀಡದೇ ಇರಲು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ನಿರ್ಧರಿಸಿದೆ. ದೇಶದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ತೀರ್ಮಾನಕ್ಕೆ ಬರಲಾಗಿದ್ದು ಟಿಕೆಟ್ ಮಾರಾಟವನ್ನು ತಡೆಯಲಾಗಿದೆ. 

ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್‌–19ರ ನಾಲ್ಕನೇ ಅಲೆ ಆತಂಕ ಸೃಷ್ಟಿಸಿದೆ. ಕಳೆದ ವಾರ ದಾಖಲೆ ಪ್ರಮಾಣದ ಪ್ರಕರಣಗಳು ಪತ್ತೆಯಾಗಿದ್ದವು. ಹೀಗಾಗಿ ವಿಶೇಷ ಆಹ್ವಾನಿತರಿಗೆ ಮಾತ್ರ ಪಂದ್ಯ ವೀಕ್ಷಣೆಗೆ ಅವಕಾಶ ನೀಡಲಾಗುವುದು ಎಂದು ಸಿಎಸ್‌ಎ ವಿವರಿಸಿದೆ.  

ಪ್ರಮುಖ ದೇಶಿ ಟೂರ್ನಿಯಾದ ನಾಲ್ಕು ದಿನಗಳ ಫ್ರಾಂಚೈಸ್‌ ಸರಣಿಯ ಕೊನೆಯ ಹಂತದ ಪಂದ್ಯಗಳನ್ನು ಕೋವಿಡ್ ಕಾರಣದಿಂದ ರದ್ದುಗೊಳಿಸಲಾಗಿದೆ.

ಡಿಸೆಂಬರ್ 16ರಂದು ಭಾರತ ತಂಡ ದಕ್ಷಿಣ ಆಫ್ರಿಕಾ ತಲುಪಿದ್ದು ಆಟಗಾರರು ರೆಸಾರ್ಟ್ ಒಂದರಲ್ಲಿ ಬಯೊಬಬಲ್‌ನಲ್ಲಿ ಉಳಿದುಕೊಂಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು