ಭಾನುವಾರ, ಅಕ್ಟೋಬರ್ 24, 2021
27 °C

IPL 2021: ವಿರಾಟ್‌ ಕೊಹ್ಲಿ vs ರೋಹಿತ್‌ ಶರ್ಮಾ, ಒತ್ತಡದಲ್ಲಿ ಸ್ಟಾರ್‌ ಆಟಗಾರರು!

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್‌ ಪ್ರೀಮಿಯರ್ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ 39ನೇ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ – ರೋಹಿತ್‌ ಶರ್ಮಾ ಮುಖಾಮುಖಿಯಾಗಲಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ಸರಣಿ ಪುನರಾರಂಭಗೊಂಡಿದ್ದು, ದ್ವಿತೀಯಾರ್ಧದ ಪಂದ್ಯಗಳನ್ನು ದುಬೈಯಲ್ಲಿ ಆಯೋಜಿಸಲಾಗಿದೆ.

ಕೊಹ್ಲಿ ನಾಯಕತ್ವದ ಆರ್‌ಸಿಬಿ ಮತ್ತು ರೋಹಿತ್‌ ನಾಯಕತ್ವದ ಮುಂಬೈ ಇಂಡಿಯನ್ಸ್‌ ಎದುರಾಳಿ ತಂಡಗಳ ವಿರುದ್ಧ ಸತತ ಎರಡು ಬಾರಿ ಸೋಲು ಕಂಡಿವೆ. ಹಾಗಾಗಿ ಭಾನುವಾರ ನಡೆಯಲಿರುವ ಪಂದ್ಯ ಉಭಯ ತಂಡಗಳಿಗೆ ಹೆಚ್ಚು ಮಹತ್ವದಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಮುಂಬರುವ ಟ್ವೆಂಟಿ-20 ವಿಶ್ವಕಪ್ ಬಳಿಕ ಟಿ-20 ನಾಯಕತ್ವವನ್ನು ಬಿಟ್ಟುಕೊಟ್ಟು ಬ್ಯಾಟಿಂಗ್‌ನತ್ತ ಗಮನ ಹರಿಸಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರಿಗೆ ನಾಯಕತ್ವದ ಪಟ್ಟ ಕಟ್ಟುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.

ಕೊಹ್ಲಿ ನಾಯಕತ್ವದ ಆರ್‌ಸಿಬಿ ಮತ್ತು ರೋಹಿತ್‌ ನಾಯಕತ್ವದ ಮುಂಬೈ ಇಂಡಿಯನ್ಸ್‌ ಸತತ ಸೋಲುಗಳಿಂದ ಕಂಗೆಟ್ಟಿವೆ.

ನಾಯಕತ್ವ ಸ್ಥಾನದಿಂದ ನಿರ್ಗಮಿಸುತ್ತಿರುವ ಕೊಹ್ಲಿ ಹಾಗೂ ಹೊಸದಾಗಿ ನಾಯಕತ್ವ ವಹಿಸಿಕೊಳ್ಳಲಿರುವ ರೋಹಿತ್ ಶರ್ಮಾ ಇಬ್ಬರಿಗೂ ಸತತ ಸೋಲುಗಳು ತಲೆನೋವಾಗಿ ಪರಿಣಮಿಸಿವೆ.

ಆರ್‌ಸಿಬಿ ಟೂರ್ನಿಯಲ್ಲಿ ಒಂಬತ್ತು ಪಂದ್ಯಗಳನ್ನು ಆಡಿದೆ. 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.  4 ಪಂದ್ಯ ಸೋತಿದ್ದು, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಇತ್ತ ಮುಂಬೈ ಇಂಡಿಯನ್ಸ್‌ ಆಡಿರುವ 9 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 5 ಪಂದ್ಯ ಸೋತಿದ್ದು, ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

ಪ್ರಮುಖ ಆಟಗಾರರು ಫಾರ್ಮ್‌ನಲ್ಲಿ ಇಲ್ಲದಿರುವುದು ಉಭಯ ತಂಡಗಳ ನಾಯಕರಿಗೆ ನುಂಗಲಾರದ ತುತ್ತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು