ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಧೋನಿ, ರೈನಾ ವಿದಾಯ

Last Updated 15 ಆಗಸ್ಟ್ 2020, 19:18 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಸುಮಾರು ಒಂದು ವರ್ಷದಿಂದ ಅವರ ನಿವೃತ್ತಿಯ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ಶನಿವಾರ ತೆರೆಬಿದ್ದಿದೆ.

‘ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಇಂದು ಸಂಜೆ 7.29 (19.29) ರಿಂದ ನನ್ನನ್ನು ನಿವೃತ್ತನೆಂದು ಪರಿಗಣಿಸಿ‘ ಎಂದು 39 ವರ್ಷದ ವಿಕೆಟ್‌ಕೀಪರ್– ಬ್ಯಾಟ್ಸ್‌ಮನ್ ಧೋನಿ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ಧೋನಿ ಜೊತೆ ಇನ್ನೊಬ್ಬ ಹಿರಿಯ ಆಟಗಾರ ಸುರೇಶ್‌ ರೈನಾ ಅವರೂ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಧೋನಿ ನಾಯಕತ್ವದಲ್ಲಿ ಭಾರತ ತಂಡವು 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. 2014ರಲ್ಲಿ ಅವರು ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

’ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಇಂದು ಸಂಜೆ (ಶನಿವಾರ) 7.29 (19.29) ರಿಂದ ನನ್ನನ್ನು ನಿವೃತ್ತನೆಂದು ಪರಿಗಣಿಸಿ‘ ಎಂದು 39 ವರ್ಷದ ವಿಕೆಟ್‌ಕೀಪರ್– ಬ್ಯಾಟ್ಸ್‌ಮನ್ ಧೋನಿ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ಅವರ ನಾಯಕತ್ವದಲ್ಲಿ ಭಾರತ ತಂಡವು 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. 2014ರಲ್ಲಿ ಅವರು ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 2017ರಲ್ಲಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತಂಡದ ನಾಯಕತ್ವವನ್ನು ಬಿಟ್ಟುಕೊಟ್ಟಿದ್ದರು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಟಗಾರನಾಗಿ ಮುಂದುವರಿದಿದ್ದರು. ಹೋದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಂತರ ಅವರು ಭಾರತ ತಂಡಕ್ಕೆ ಮರಳಿರಲಿಲ್ಲ.

’ಕ್ಯಾಪ್ಟನ್ ಕೂಲ್‘ ಎಂದೇ ಖ್ಯಾತರಾಗಿರುವ ಧೋನಿ ಮುಂದಿನ ತಿಂಗಳು ಯುಎಇಯಲ್ಲಿ ನಡೆಯಲಿರುವ ಐಪಿಎಲ್ 13ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವರು. ಪೂರ್ವಸಿದ್ಧತಾ ಶಿಬಿರದಲ್ಲಿ ಭಾಗವಹಿಸಲು ಅವರು ಶುಕ್ರವಾರ ಚೆನ್ನೈಗೆ ಬಂದಿಳಿದ್ದಾರೆ.

ಧೋನಿ ನಾಯಕತ್ವದಲ್ಲಿ ಭಾರತ ತಂಡವು ಟೆಸ್ಟ್‌ ಕ್ರಿಕೆಟ್‌ನಲ್ಲಿ ಐಸಿಸಿಯ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿತ್ತು. ಹಲವು ನೂತನ ಸಾಧನೆಗಳಿಗೆ ಅವರ ನಾಯಕತ್ವ ಕಾರಣವಾಗಿತ್ತು.

ಜಾರ್ಖಂಡ್ ರಾಜಧಾನಿ ರಾಂಚಿಯ ಧೋನಿ ಹೆಚ್ಚಾಗಿ ಬ್ಯಾಟಿಂಗ್ ಮಾಡಿದ್ದು 5 ಅಥವಾ 7ನೇ ಕ್ರಮಾಂಕದಲ್ಲಿ. ಆದರೂ 350 ಏಕದಿನ ಪಂದ್ಯಗಳಿಂದ 10773 ರನ್‌ಗಳನ್ನು ಗಳಿಸಿದ್ದಾರೆ. ಅದರಲ್ಲಿ10 ಶತಕ ಮತ್ತು 73 ಅರ್ಧಶತಕಗಳು ಇವೆ.

90 ಟೆಸ್ಟ್‌ಗಳಲ್ಲಿ 4876 ರನ್‌ ಗಳನ್ನು ಕಲೆಹಾಕಿದ್ದರು. ಅದರಲ್ಲಿ ಆರು ಶತಕ, ಒಂದು ದ್ವಿಶತಕ ಮತ್ತು 33 ಅರ್ಧಶತಕಗಳು ಸೇರಿವೆ.

ಟಿ20 ಕ್ರಿಕೆಟ್‌ನಲ್ಲಿ 98 ಪಂದ್ಯಗಳನ್ನು ಆಡಿ 4432 ರನ್‌ಗಳನ್ನು ಗಳಿಸಿದ್ದಾರೆ. ಎರಡು ಅರ್ಧಶತಕಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT