ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓವಲ್, ಲಾರ್ಡ್ಸ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌: ಐಸಿಸಿ

2023 ಹಾಗೂ 2025ರ ಪ್ರಶಸ್ತಿ ಸುತ್ತಿನ ಸ್ಥಳ ಪ್ರಕಟಿಸಿದ ಐಸಿಸಿ
Last Updated 21 ಸೆಪ್ಟೆಂಬರ್ 2022, 13:54 IST
ಅಕ್ಷರ ಗಾತ್ರ

ದುಬೈ: ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ 2023 ಹಾಗೂ 2025ರ ಫೈನಲ್‌ ಪಂದ್ಯಗಳು ಕ್ರಮವಾಗಿ ದ ಓವಲ್ ಮತ್ತು ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿವೆ.

ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ಈ ವಿಷಯ ಪ್ರಕಟಿಸಿದೆ.

‘ಮುಂದಿನ ವರ್ಷದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಆಯೋಜನೆ ಮಾಡುತ್ತಿರುವುದು ಸಂತಸದ ವಿಷಯ. ದ ಓವಲ್ ಕ್ರೀಡಾಂಗಣವು ಭವ್ಯ ಇತಿಹಾಸ ಹೊಂದಿದೆ. ಅಲ್ಲಿ ನಡೆಯುವ ಫೈನಲ್ ಪಂದ್ಯವೂ ವೈಭವಯುತವಾಗಿ ಇರುವುದು ಖಚಿತ’ ಎಂದು ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಜೆಫ್ ಅಲರ್‌ಡೈಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಳೆದ ಬಾರಿಯ ಟೂರ್ನಿಯ ಫೈನಲ್ ಪಂದ್ಯವು ಸೌತಾಂಪ್ಟನ್‌ನಲ್ಲಿ ನಡೆದಿತ್ತು. ಭಾರತ ತಂಡದ ವಿರುದ್ಧ ನ್ಯೂಜಿಲೆಂಡ ಜಯಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಮುಂಬರುವ ಫೈನಲ್‌ಗಾಗಿ ಕಾತರದಿಂದ ಎದುರು ನೋಡುತ್ತಿದ್ದಾರೆ’ ಎಂದು ಜೆಫ್ ಹೇಳಿದ್ದಾರೆ.

ಎರಡನೇ ಆವೃತ್ತಿ ಟೆಸ್ಟ್ ಚಾಂಪಿಯನ್‌ಷಿಪ್ ಆಗಸ್ಟ್ 4ರಿಂದ ಆರಂಭವಾಗಿದೆ. ಮುಂದಿನ ವರ್ಷ ಮಾರ್ಚ್ 31ರಂದು ಮುಕ್ತಾಯವಾಗಲಿದೆ. ಸದ್ಯದ ಡಬ್ಲ್ಯುಬಿಸಿ ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಅಗ್ರಸ್ಥಾನಗಳಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT