ಮುಖ್ಯ ಕೋಚ್ ಸ್ಥಾನದಿಂದ ರವಿಶಾಸ್ತ್ರಿ ತೆಗೆಯಲು ಕಾರಣವಿಲ್ಲ: ಕಪಿಲ್ ದೇವ್

ನವದೆಹಲಿ: ‘ರವಿಶಾಸ್ತ್ರಿ ಅವರು ಮುಂದೆಯೂ ಉತ್ತಮ ಫಲಿತಾಂಶಗಳನ್ನು ನೀಡಿದರೆ, ಅವರನ್ನು ಭಾರತ ತಂಡದ ಮುಖ್ಯ ಕೋಚ್ ಸ್ಥಾನದಿಂದ ತೆಗೆಯಲು ಯಾವುದೇ ಕಾರಣಗಳಿಲ್ಲ’ ಎಂದು ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ.
ಅಕ್ಟೋಬರ್–ನವೆಂಬರ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ನಡೆಯಲಿರುವ ಟಿ 20 ವಿಶ್ವಕಪ್ ಬಳಿಕ ರವಿ ಶಾಸ್ತ್ರಿ ಅವರ ಒಪ್ಪಂದವು ಕೊನೆಗೊಳ್ಳಲಿದೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರನ್ನು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎಂಬ ಊಹಾಪೋಹಗಳು ಕೇಳಿಬಂದಿವೆ. ಆದರೆ, ಈ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.
‘ಈ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ. ಶ್ರೀಲಂಕಾ ಸರಣಿ ಮೊದಲು ಮುಗಿಯಲಿ. ಹೊಸ ಕೋಚ್‌ಗೆ ಅವಕಾಶ ನೀಡಿದರೆ ತಪ್ಪಿಲ್ಲ. ಆದರೆ, ರವಿಶಾಸ್ತ್ರಿ ಉತ್ತಮ ಫಲಿತಾಂಶ ನೀಡುತ್ತಿದ್ದಾರೆ. ಅವರನ್ನು ಮುಖ್ಯ ಕೋಚ್ ಸ್ಥಾನದಿಂದ ತೆಗೆಯಲು ಯಾವುದೇ ಕಾರಣವಿಲ್ಲ. ಕೋಚ್ ಮತ್ತು ಆಟಗಾರರ ಮೇಲೆ ಒತ್ತಡ ಹೇರಬಾರದು’ ಎಂದು ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.