ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಪೆ ಕಾಮಗಾರಿ: ಕ್ರಮಕ್ಕೆ ಆಗ್ರಹ

ಕೊಳ್ಳೇಗಾಲ: ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಒತ್ತಾಯ
Last Updated 7 ಮಾರ್ಚ್ 2018, 8:57 IST
ಅಕ್ಷರ ಗಾತ್ರ

ಕೊಳ್ಳೇಗಾಲ: ನಗರಸಭೆ ಅಧ್ಯಕ್ಷ ಶಾಂತರಾಜು ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಸೋಮವಾರ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಯಿತು.

ಸಭೆಯಲ್ಲಿ ಮುಖಂಡ ನಟರಾಜ್ ಮಾಳಿಗೆ ಮಾತನಾಡಿ, ನಗರದ ಬಸ್ ನಿಲ್ದಾಣದಲ್ಲಿ ಶೌಚಾಲಯ ಇಲ್ಲದಿರುವುದರಿಂದ ಮಹಿಳೆಯರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು, ಅಗತ್ಯ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ನಗರವ್ಯಾಪ್ತಿಯಲ್ಲಿ ನಿರ್ಮಾಣ ವಾಗಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.

ರೈತ ಸಂಘ ಜಿಲ್ಲಾ ಘಟಕದ ಕಾರ್ಯದರ್ಶೀ ಶೈಲೇಂದ್ರ ಮಾತನಾಡಿ, ಬೀದಿನಾಯಿಗಳ ಹಾವಳಿ ಹೆಚ್ಚಿದ್ದು ನಗರಸಭೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ಶಾಲೆ ಕಾಲೇಜುಗಳ ಮುಂಭಾಗ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು. ಕಲ್ಯಾಣ ಮಂಟಪಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡದಿರುವುದರಿಂದ ರಸ್ತೆಯಲ್ಲೇ ವಾಹನ ನಿಲ್ಲಿಸಲಾಗುತ್ತಿದೆ. ಹೋಟೆಲ್‌, ಕೋಳಿ ಮಾಂಸದ ಅಂಗಡಿಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದರಿಂದ ನಗರದಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೌರಾಯುಕ್ತ ಡಿ.ಕೆ.ಲಿಂಗರಾಜು ಮಾತನಾಡಿ, ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬೆಂಗಳೂರು ರಸ್ತೆಯಲ್ಲಿ ಈಗಾಗಲೆ ತಾತ್ಕಾಲಿಕ ಬಸ್ ನಿಲ್ದಾಣ ಮಾಡಲಾಗಿದ್ದು, ಮೂಲ ಸೌಕರ್ಯಕ್ಕೆ ಅದ್ಯತೆ ನೀಡಲಾಗಿದೆ. ₹ 5ಲಕ್ಷ ವೆಚ್ಚದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಆಳವಡಿಸಲು ಹಣ ಮೀಸಲಿಡಲಾಗಿದೆ. ಗುಣಮಟ್ಟ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷ, ಸದಸ್ಯರಾದ ಎ.ಪಿ.ಶಂಕರ್, ಅಕ್ಮಲ್, ಕಲೀಂವುಲ್ಲಾ, ವಿವಿಧ ಸಂಘಟನೆ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT