ಬೆಂಗಳೂರು: ಬ್ಯಾಟಿಂಗ್‌ನಲ್ಲಿ ನಿರಂತರವಾಗಿ ವೈಫಲ್ಯ ಅನುಭವಿಸುತ್ತಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪಾಕಿಸ್ತಾನ ತಂಡದ ನಾಯಕ ಬಾಬರ್ಆಜಂ ಬೆಂಬಲ ನೀಡಿದ್ದಾರೆ.
ವಿರಾಟ್ ಕೊಹ್ಲಿ ಜೊತೆಗಿನ ಚಿತ್ರ ಹಂಚಿಕೊಂಡಿರುವ ಬಾಬರ್, 'ಈ ಸಮಯವೂ ಕಳೆದುಹೋಗುತ್ತದೆ. ದೃಢವಾಗಿ ಉಳಿಯಿರಿ' ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಫಾರ್ಮ್ ಸಮಸ್ಯೆ ಶಾಶ್ವತವಲ್ಲ ಎಂದು ತಿಳಿಸಿದ್ದಾರೆ.
ಭಾರತ ತಂಡ ಸದ್ಯ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಸೆಣಸುತ್ತಿದೆ. ಗಾಯದ ಸಮಸ್ಯೆಯಿಂದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ಕೊಹ್ಲಿ, ಎರಡನೇ ಪಂದ್ಯದಲ್ಲಿ ಕೇವಲ 16 ರನ್ ಗಳಿಸಿ ಔಟ್ ಆಗಿದ್ದರು. ಮುಂದಿನ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ಭಾನುವಾರ ನಡೆಯಲಿದೆ.
2019ರ ನವೆಂಬರ್ ಬಳಿಕ ಕ್ರಿಕೆಟ್‌ನ ಯಾವುದೇ ಮಾದರಿಯಲ್ಲಿಯೂ ಕೊಹ್ಲಿ ಒಂದೇ ಒಂದು ಶತಕ ದಾಖಲಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿಲ್ಲ.
ಕೊಹ್ಲಿ ಫಾರ್ಮ್ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ. ಇದರ ಮಧ್ಯೆಯೇ, ಅವರಿಗೆ ಜುಲೈ 29 ರಿಂದ ಆಗಸ್ಟ್ 7 ರವರೆಗೆ ವೆಸ್ಟ್ ವಿಂಡೀಸ್ ವಿರುದ್ಧ ನಡೆಯುವ ಐದು ಪಂದ್ಯಗಳ ಟಿ20 ಸರಣಿಗೆ ವಿಶ್ರಾಂತಿ ನೀಡಲಾಗಿದೆ.
ಆದಾಗ್ಯೂ, ಬಾಬರ್‌ಆಜಂ, ಕೊಹ್ಲಿ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೂ, ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲಾಗದು ಎನ್ನುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸುವ ಪ್ರಯತ್ನ ಮಾಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.